ಖಾಸಗಿ ವಾಹನ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವು ಖಾಸಗಿ ವಾಹನ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ.

ರಾಜ್ಯದ ಖಾಸಗಿ ಬಸ್, ಟೆಂಪೋ, ಟ್ಯಾಕ್ಸಿಗಳಿಗೆ ಮೋಟಾರು ವಾಹನ ತೆರಿಗೆ ವಿನಾಯ್ತಿ ನೀಡಿದೆ. ಕೊರೊನಾ ಲಾಕ್‍ಡೌನ್‍ನಿಂದಾಗಿ ರಾಜ್ಯದ ವಿವಿಧ ಪ್ರದೇಶದಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಸೇರಿಸಲು ಓಡಾಟ ಪ್ರಾಂಭಿಸಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ, ಜಿಲ್ಲಾಡಳಿತ. ಅಧಿಕೃತ ಪ್ರಾಧಿಕಾರಗಳಿಂದ ಸಂಚಾರಕ್ಕೆ ಅನುಮತಿ ಪಡೆದ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ರಾಜ್ಯದ ಖಾಸಗಿ ವಾಹನಗಳಿಗೆ ಸರ್ಕಾರವು ಒಟ್ಟು ಎರಡು ತಿಂಗಳ ತೆರಿಗೆ ವಿನಾಯ್ತಿ ನೀಡಿ ಅಧಿಸೂಚನೆ ಹೊರಡಿಸಿದೆ.

ಅಧಿಸೂಚನೆಯಲ್ಲಿ ಏನಿದೆ?:ಕೋವಿಡ್-19 ಹಿನ್ನೆಲೆ ರಾಜ್ಯವನ್ನು ಸಂಪೂರ್ಣವಾಗಿ ಲಾಕ್‍ಡೌನ್ ಮಾಡಲಾಗಿದೆ. ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 16(1)ರ ಅನ್ವಯ ರಾಜ್ಯದಲ್ಲಿ ನೋಂದಾಯಿಸಿರು (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಪ್ರಯಾಣಿಕರು ಮತ್ತು ಸರಕು ಸಾರಿಗೆ ವಾಹನಗಳ ತೆರಿಗೆಯನ್ನು ಮಾರ್ಚ್ 24ರಿಂದ ಮೇ 23ರವರೆಗೆ ಒಟ್ಟು ಎರಡು ತಿಂಗಳ ಅವಧಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಆದೇಶ ಮಾಡಲಾಗಿದೆ.


1 thought on “ಖಾಸಗಿ ವಾಹನ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

  1. Private buses running for the village routes, this two months road tax concessions will be help full.

Leave a Reply

Your email address will not be published. Required fields are marked *

error: Content is protected !!