ಬ್ಯಾಡ್ಮಿಂಟನ್ ಪ್ರಕಾಶ್ ಪಡುಕೋಣೆ ಕೋವಿಡ್ ಸೋಂಕಿನಿಂದ ಚೇತರಿಕೆ

ಬೆಂಗಳೂರು ಎ.4( ಉಡುಪಿ ಟೈಮ್ಸ್ ವರದಿ): ಬ್ಯಾಡ್ಮಿಂಟನ್ ದಂತ ಕತೆ ಪ್ರಕಾಶ್ ಪಡುಕೋಣೆ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರು ಸೋಂಕಿನಿಂದ ಚೇತರಿಸಿ ಕೊಳ್ಳುತ್ತಿರುವುದಾಗಿ ವರದಿಯಾಗಿದೆ.

‘ಸುಮಾರು 10 ದಿನಗಳ ಹಿಂದೆ ಪ್ರಕಾಶ್ ಪಡುಕೋಣೆ, ಅವರ ಪತ್ನಿ ಉಜ್ವಲಾ ಮತ್ತು ದ್ವಿತೀಯ ಪುತ್ರಿ ಅನಿಶಾಗೆ ಕೊರೊನಾವೈರಸ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಅವರನ್ನು ಪರೀಕ್ಷಿಸಿದಾಗ ಅವರಿಗೆ ಕೊರೋನಾ ಸೋಂಕಿರುವುದು ದೃಢಪಟ್ಟಿತ್ತು‌. ಸದ್ಯ ‘ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಈಗ ಸುಧಾರಿಸಿದ್ದು2-3 ದಿನಗಳಲ್ಲಿ ಡಿಚ್‌ಚಾರ್ಜ್‌ ಆಗಲಿದ್ದಾರೆ ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಹೇಳಿದ್ದಾರೆ. 

ಪ್ರಕಾಶ್ ಪಡುಕೋಣೆ ಬ್ಯಾಡ್ಮಿಂಟನ್ ಅಕಾಡೆಮಿಯ ನಿರ್ದೇಶಕರಾಗಿರುವ ಪ್ರಕಾಶ್ ಅವರು 1980ರಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ ‌ಶಿಪ್ ಪ್ರಶಸ್ತಿ ಗೆದ್ದಿದ್ದರು. 1983ರಲ್ಲಿ ವರ್ಲ್ಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಗೆದ್ದಿದ್ದ ಪಡುಕೋಣೆ ಭಾರತೀಯರ ಪರ ಈ ಪದಕ ಗೆದ್ದ ಮೊದಲ ಸಾಧಕನಾಗಿ ಗುರುತಿಸಿಕೊಂಡಿದ್ದರು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಇವರ ಮಗಳಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!