ಜಿಲ್ಲೆಯಲ್ಲಿ 556 ಕೊರೋನಾ ಪಾಸಿಟಿವ್: ಉಡುಪಿಯ 78 ವರ್ಷ ಹಾಗೂ ಕಾರ್ಕಳದ 46 ವರ್ಷದ ಇಬ್ಬರ ಮೃತ್ಯು

ಉಡುಪಿ, ಮೇ.4 (ಉಡುಪಿ ಟೈಮ್ಸ್ ವರದಿ): ಇಂದು ಜಿಲ್ಲೆಯಲ್ಲಿ 556 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಉಡುಪಿ ತಾಲೂಕಿನಲ್ಲಿಯೇ 319 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಅಲ್ಲದೆ ಇಂದು ಜಿಲ್ಲೆಯಲ್ಲಿ ಇಬ್ಬರು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಜಿಲ್ಲೆಯಲ್ಲಿ ಇಂದು 556 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.  ಜಿಲ್ಲೆಯಲ್ಲಿ ಮೇ.3 ರಂದು 337 ಮಂದಿ ಸೋಂಕಿತರು  ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇಂದು ಜಿಲ್ಲೆಯಲ್ಲಿ ಪತ್ತೆಯಾದ ಕೋವಿಡ್ ಪಾಸಿಟಿವ್ ಪ್ರಕರಣಗಳ ಪೈಕಿ ಉಡುಪಿಯಲ್ಲಿ 319 ಕುಂದಾಪುರ 171, ಕಾರ್ಕಳ 64 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸದ್ಯ 2,705 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ಇಂದು ಉಡುಪಿಯ 78 ವರ್ಷದ ಹಾಗೂ ಕಾರ್ಕಳದ 46 ವರ್ಷದ ವ್ಯಕ್ಯಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ.

ಮೇ. 3 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,15,195 ಮಂದಿಯನ್ನು ಕೋವಿಡ್  ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 33,710 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 30,802 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 203 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ

Leave a Reply

Your email address will not be published. Required fields are marked *

error: Content is protected !!