ಚಾಮರಾಜನಗರ ಜಿಲ್ಲಾಸ್ಪತ್ರೆ, ಮೈಸೂರು ಜಿಲ್ಲಾಧಿಕಾರಿ ಕಚೇರಿಯ ಎಲ್ಲಾ ದಾಖಲೆ ಸೀಜ್ ಮಾಡಿ: ಹೈಕೋರ್ಟ್ ಆದೇಶ
ಬೆಂಗಳೂರು, ಮೇ.05: ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 20 ಕ್ಕೂ ಅಧಿಕ ಕೋವಿಡ್ ಸೋಂಕಿತರು ಮೃತಪಟ್ಟ ಘಟನೆಗೆ ಸಂಬಂಧಿಸಿ ಚಾಮರಾಜನಗರ ಜಿಲ್ಲಾಸ್ಪತ್ರೆಯ, ಚಾಮರಾಜನಗರ ಜಿಲ್ಲಾಧಿಕಾರಿ, ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿನ ಎಲ್ಲಾ ದಾಖಲೆಗಳನ್ನು ಶೀಘ್ರವೇ ಸೀಜ್ ಮಾಡುವಂತೆ ಹೈಕೋರ್ಟ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ ಎಂಬ ಸುದ್ದಿ ವರದಿಯಾಗಿದೆ.
ಈ ಕುರಿತು ಆದೇಶ ನೀಡಿರುವ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, “ಸರಕಾರ ನೇಮಿಸಿದ ತನಿಖಾಧಿಕಾರಿ ಸೀಜ್ ಮಾಡಿದ ದಾಖಲೆಗಳನ್ನು ಪರಿಶೀಲನೆ ಮಾಡಬಹುದು”ಎಂದಿದ್ದಾರೆ.ಈ ವೇಳೆ ಅಡ್ವೋಕೇಟ್ ಜನರಲ್ ಅವರು 24 ಕೊರೊನಾ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿರುವ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಸರ್ಕಾರ ಸಿದ್ದ. ನಿವೃತ್ತ ನ್ಯಾಯಮೂರ್ತಿಯೊಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ” ಎಂದು ಹೈಕೋರ್ಟ್ಗೆ ತಿಳಿಸಿದ್ದಾರೆ.
ಅಡ್ವೋಕೇಟ್ ಜನರಲ್ ಅವರ ಹೇಳಿಗೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿ ಅವರು ನ್ಯಾಯಾಂಗ ತನಿಖೆಯ ಬಗ್ಗೆ ನಿಲುವು ತಿಳಿಸಲು ಮಾತ್ರವೇ ಹೇಳಿದ್ದೆವು. ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ವಿಚಾರವನ್ನು ಹೈಕೋರ್ಟ್ಗೆ ಬಿಡಿ” ಎಂದಿದ್ದಾರೆ.