ಹಾಸಿಗೆ ಕಾಯ್ದಿರಿಸುವ ದಂಧೆಯ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಶಂಕೆ: ಈಶ್ವರಪ್ಪ

ಶಿವಮೊಗ್ಗ: ಬೆಂಗಳೂರಿನಲ್ಲಿ ಹಣ ಕೊಟ್ಟರೆ ಹಾಸಿಗೆ ಕಾಯ್ದಿರಿಸುವ ದಂಧೆಯ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್‌ ರೆಡ್ಡಿ, ರವಿ ಸುಬ್ರಹ್ಮಣ್ಯ ಹಗರಣ ಬಯಲಿಗೆ ಎಳೆದಿದ್ದಾರೆ. ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿಯನ್ನು ಸರ್ಕಾರ ಸೂಕ್ತವಾಗಿ ನಿಭಾಯಿಸುತ್ತಿದೆ. ಆಮ್ಲಜನಕ ಪೂರೈಕೆ, ಲಸಿಕೆ ನೀಡುವಿಕೆಯಲ್ಲಿ ಸಮರ್ಪಕವಾಗಿ ಕೆಲಸ ಮಾಡುತ್ತಿದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಇಂತಹ ಕೆಲಸ ಮಾಡಲಾಗುತ್ತಿದೆ. ಇಂತಹ ಕೃತ್ಯಗಳ ಹಿಂದೆ ಯಾರೇ ಇದ್ದರೂ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. 

Leave a Reply

Your email address will not be published. Required fields are marked *

error: Content is protected !!