ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಚಿವರಿಗೆ ಸಿಎಂ ಸೂಚನೆ: ಪೂರ್ಣಪ್ರಮಾಣದ ಲಾಕ್ ಡೌನ್ ಸುಳಿವು!
ಬೆಂಗಳೂರು: ಕೋವಿಡ್-19 ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡುವಂತೆ ಸಿಎಂ ಯಡಿಯೂರಪ್ಪ ಸಂಪುಟ ಸಹೊದ್ಯೋಗಿಗಳಿಗೆ ಸೂಚನೆ ನೀಡಿದ್ದಾರೆ.
ಮತ್ತಷ್ಟು ನಿರ್ಬಂಧಗಳನ್ನು ವಿಧಿಸುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳು, ಈ ಕುರಿತು ಪ್ರಧಾನಿ ಕೈಗೊಳ್ಳುವ ನಿರ್ಧಾರವನ್ನು ನಾವು ಜಾರಿಗೊಳಿಸಬೇಕಾಗಿದೆ” ಎಂದು ಹೇಳಿದ್ದಾರೆ.
“ನಾವೂ ಸಹ ಅವರ ನಿರ್ದೇಶನಗಳಿಗೇ ಕಾಯುತ್ತಿದ್ದೇವೆ, ಸಂಜೆ ವೇಳೆಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ವರದಿಗಾರರಿಗೆ ಸಿಎಂ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ನ ಇತ್ತೀಚಿನ ಶಿಫಾರಸಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೋವಿಡ್-19 ಗೆ ನಿಯಂತ್ರಣಕ್ಕೆ ಕಠಿಣ ನಿರ್ಬಂಧಗಳನ್ನು ವಿಧಿಸುವ ಸಂಬಂಧ ನಿರ್ಧಾರ ಕೈಗೊಳ್ಳಲಿದ್ದಾರೆ.
“ಸಾರ್ವಜನಿಕ ಹಿತಾಸಕ್ತಿಯ ದೃಷ್ಟಿಯಿಂದ ಕೋವಿಡ್-19 ಎರಡನೇ ಅಲೆಯನ್ನು ತಡೆಯುವುದಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಲಾಕ್ ಡೌನ್ ನ್ನು ಪರಿಗಣಿಸಬೇಕು” ಎಂದು ಸುಪ್ರೀಂ ಕೋರ್ಟ್ ಸಲಹೆ ನೀಡಿತ್ತು. ಕೆಲವು ದಿನಗಳಿಂದ ಕರ್ನಾಟಕದಲ್ಲಿ ಪ್ರತಿ ದಿನ 40 ಸಾವಿರಕ್ಕೂ ಅಧಿಕ ಕೇಸ್ ಗಳು ವರದಿಯಾಗುತ್ತಿದ್ದು, 200 ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ.