ಬೆಡ್ ಬ್ಲಾಕಿಂಗ್ ದಂಧೆ: ಸರಕಾರದ ಮುಖ್ಯ ಕಾರ್ಯದರ್ಶಿ ಸೇರಿ 31 ಅಧಿಕಾರಿಗಳ ವಿರುದ್ಧ ಸ್ವಯಂ ದೂರು -ಲೋಕಾಯುಕ್ತ
ಬೆಂಗಳೂರು ಮೇ.6: ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೋವಿಡ್ ಪಾಸಿಟಿವ್ ಪ್ರಕರಣಗಳ ಬೆನ್ನಲ್ಲೇ ಬೆಚ್ಚಿ ಬೀಳಿಸುವಂತೆ ಬೆಡ್ ಬ್ಲಾಕಿಂಗ್ ದಂಧೆ ಬೆಳಕಿಗೆ ಬಂದಿತ್ತು. ಇದೀಗ ಈ ಬೆಡ್ ಬ್ಲಾಕಿಂಗ್ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಸರಕಾರದ ಮುಖ್ಯ ಕಾರ್ಯದರ್ಶಿ ಸೇರಿ 31 ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.
ಪ್ರಕರಣ ಕ್ಕೆ ಸಂಬಂಧಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ನಿರ್ವಾಹಕರು, ಬಿಬಿಎಂಪಿ ಮುಖ್ಯ ಆಯುಕ್ತರು ಸೇರಿ ಪ್ರಕರಣಕ್ಕೆ ಸಂಬಂಧಿಸಿದ 31 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಂಸ್ಥೆ ಸ್ವಯಂ ದೂರು ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿ ಜೂನ್ 1ಕ್ಕೆ ವಿಚಾರಣೆ ನಡೆಯಲಿದ್ದು, ಮೂರು ವಾರದೊಳಗೆ ಬೆಡ್ ಬ್ಲಾಕಿಂಗ್ ಸಂಬಂಧಿಸಿದ ವರದಿಗಳನ್ನು ಅಧಿಕಾರಿಗಳು ಲೋಕಾಯುಕ್ತಕ್ಕೆ ಸಲ್ಲಿಸ ಬೇಕು ಎಂದು ಲೋಕಾಯುಕ್ತ ನ್ಯಾ.ಪಿ.ವಿಶ್ವನಾಥ ಶೆಟ್ಟಿ ಸೂಚಿಸಿದ್ದಾರೆ ಎಂದು ವರದಿಯಾಗಿದೆ.