ಕೇರಳ: ಮೇ 8 ರಿಂದ ಸಂಪೂರ್ಣ ಲಾಕ್ ಡೌನ್- ಮುಖ್ಯಮಂತ್ರಿ ಪಿಣರಾಯಿ ವಿಜಯನ್
ತಿರುವನಂತಪುರಂ: ಕೇರಳದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಈ ನಿಟ್ಟಿನಲ್ಲಿ ಮೇ 8 ರಿಂದ ಸಂಪೂರ್ಣ ಲಾಕ್ಡೌನ್ ಮಾಡಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ಧಾರ ಮಾಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಪಿಣರಾಯಿ ವಿಜಯನ್, ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ಹಾಗಾಗಿ ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ 16ರ ವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಒಂದೇ ದಿನ ಕೇರಳದಲ್ಲಿ 41,953 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 58 ಸಾವು ಸಂಭವಿಸಿದೆ