ದ.ಕ‌: ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದಲೇ (ಮೇ.7) ಟಫ್ ರೂಲ್ಸ್!

ಮಂಗಳೂರು, ಮೇ 06: (ಉಡುಪಿ ಟೈಮ್ಸ್ ವರದಿ)ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದ (ಮೇ.7)ರಿಂದ ದ.ಕ‌ ಜಿಲ್ಲೆಯಲ್ಲಿ ಟಫ್ ರೂಲ್ಸ್ ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಹೀಗಾಗಿ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ತುರ್ತು ಕೊವಿಡ್ ನಿರ್ವಹಣಾ ಸಭೆ ನಡೆದಿದ್ದು, ಜನತಾ ಕರ್ಪ್ಯು ಕಟ್ಟು ನಿಟ್ಟಿನ ಅನುಷ್ಟಾನಕ್ಕೆ ಸಚಿವರ ಆದೇಶ ನೀಡಿದ್ದಾರೆ.

ಬೆಳಗ್ಗೆ 6 ರಿಂದ 9 ಗಂಟೆಯಿಂದ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, 10 ಗಂಟೆ ಒಳಗೆ ವ್ಯಾಪಾರ ಮಳಿಗೆಯವರು ಹಾಗೂ ಗ್ರಾಹಕರು ಮನೆ ಸೇರಬೇಕಾಗಿದೆ.

ಅಲ್ಲದೆ ವಾಹನಗಳಲ್ಲಿ ಬೇರೆ ಕಡೆಗೆ ಓಡಾಡಿದರೆ ವಾಹನವನ್ನು ಸೀಜ್ ಮಾಡಲಾಗುವುದು. ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ ನೀಡಲಾಗಿದೆ.ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ, ಒಂದು ವೇಳೆಕಾರ್ಯಕ್ರಮ ನಿಗದಿಯಾಗಿದ್ದರೆ ಅವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಲು ನಿರ್ಧಾರ‌ ಕೈಗೊಳ್ಳಲಾಗಿದೆ. ಸಾಂಕ್ರಮಿಕ ರೋಗದ ಕೊಂಡಿ ಮುರಿಯಲು ಕಠಿಣ  ನಿಯಮ ಅನಿವಾರ್ಯವಾಗಿದ್ದು ಜಿಲ್ಲೆಯ ಜನರು ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. 

Leave a Reply

Your email address will not be published. Required fields are marked *

error: Content is protected !!