ಬೆಳಗಾವಿ: ಆಕ್ಸಿಜನ್ ಲಿಕ್ವಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತ

ಬೆಳಗಾವಿ ಮೇ.7: ನಗರಕ್ಕೆ ಆಕ್ಸಿಜನ್ ಲಿಕ್ವಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಅಪಘಾತವಾಗಿರುವ ಘಟನೆ ಮುತ್ನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.ಓವರ್ ಟೇಕ್ ಮಾಡುವ ಭರದಲ್ಲಿ ಮುಂದಿನಿಂದ ಚಲಿಸುತ್ತಿದ್ದ ಲಾರಿಗೆ ಆಕ್ಸಿಜನ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅಪಘಾತ ವೇಳೆ ‌ ಲಾರಿಯಲ್ಲಿದ್ದ ಆಕ್ಸಿಜನ್ ಲಿಕ್ವಿಡ್‍ಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಡಿಕ್ಕಿ ರಭಸಕ್ಕೆ ಟ್ಯಾಂಕರ್ ಟೈರ್ ಬ್ಲಾಸ್ಟ್ ಆಗಿ, ಎಕ್ಸಲ್ ಕಟ್ ಆಗಿದೆ. ಇದೀಗ‌ ಬೇರೆ ಖಾಲಿ ಆಕ್ಸಿಜನ್ ಟ್ಯಾಂಕರ್ ತರಿಸಿ, ಆಕ್ಸಿಜನ್ ಲಿಕ್ವಿಡ್ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ. 16 ಕೆಎಲ್ ಸಾಮಥ್ರ್ಯದ ಆಕ್ಸಿಜನ್ ಲಿಕ್ವಿಡ್ ಪೂರೈಸುತ್ತಿದ್ದ ಟ್ಯಾಂಕರ್ ಇದಾಗಿದ್ದು, ಇದೀಗ ಖಾಲಿ ಟ್ಯಾಂಕರ್ ತರಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!