ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಸೇರಿ ಹಲವು ಪೊಲೀಸ್ ಅಧಿಕಾರಿಗಳನ್ನು ಮುಂಬೈನಿಂದ ವರ್ಗಾವಣೆ
ಮುಂಬೈ ಮೇ.7: ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಸೇರಿ ಹಲವು ಪೊಲೀಸ್ ಅಧಿಕಾರಿಗಳನ್ನು ಮುಂಬೈನಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದೀಗ ಪೊಲೀಸ್ ಅಧಿಕಾರಿಗಳನ್ನು ಇತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಿ ಮಹಾರಾಷ್ಟ್ರ ಎಡಿಜಿ ಅವರು ಆದೇಶ ಹೊರಡಿಸಿದ್ದು ಉಗ್ರ ನಿಗ್ರಹ ದಳದಲ್ಲಿದ್ದ ದಯಾ ನಾಯಕ್ ಅವರನ್ನು ಗೊಂಡಿಯಾ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.
ಸದ್ಯ ದಯಾ ನಾಯಕ್ ಸೇರಿದಂತೆ ಹಲವು ಪ್ರಮುಖ ಪೊಲೀಸ್ ಅಧಿಕಾರಿಗಳನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ದಯಾ ನಾಯಕ್ ಅವರು ಮನ್ಸುಖ್ ಹಿರೇನ್ ಕೊಲೆ ಪ್ರಕರಣದ ತನಿಖೆ ನಡೆಸಿದ್ದರು. ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ದಯಾ ನಾಯಕ್ ಅವರು ಹಲವು ಸಾಕ್ಷ್ಯಗಳನ್ನು ಒಟ್ಟುಗೂಡಿಸಿದ್ದರು. ಸದ್ಯ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿದೆ.