ಕೊರೋನಾ ಪರಿಸ್ಥಿತಿ ಕಠೋರ: ಮುಂದಿನ 72 ಗಂಟೆಯೊಳಗೆ ರಾಜ್ಯಗಳಿಗೆ ಕೇಂದ್ರದಿಂದ 9 ಲಕ್ಷಕ್ಕೂ ಹೆಚ್ಚು ಹೆಚ್ಚುವರಿ ಲಸಿಕೆ ರವಾನೆ
ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅದಾಗಲೇ ಒಂದು ಕೋಟಿ ಕೋವಿಡ್ -19 ಲಸಿಕೆ ಡೋಸ್ ಗಳು ಲಭ್ಯವಿದ್ದು, ಇನ್ನು ಮುಂದಿನ ಮೂರು ದಿನಗಳಲ್ಲಿ 9 ಲಕ್ಷಕ್ಕೂ ಅಧಿಕ ಹೆಚ್ಚುವರಿ ಡೋಸ್ ಪಡೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಕೇಂದ್ರ ಸರ್ಕಾರವು ಈವರೆಗೆ ಸುಮಾರು 18 ಕೋಟಿ ಲಸಿಕೆ ಡೋಸ್ ಗಳನ್ನು(17,93,57,860) ರಾಜ್ಯಗಳು ಮತ್ತು ಯುಟಿಗಳಿಗೆ ಉಚಿತವಾಗಿ ನೀಡಿದೆ. ಇದರಲ್ಲಿ ವ್ಯರ್ಥವಾಗಿರುವುದು ಸೇರಿದಂತೆ ಒಟ್ಟು 16,89,27,797 ಡೋಸ್ ಗಳು ಎಂದು ಸಚಿವಾಲಯ ತಿಳಿಸಿದೆ.
“1 ಕೋಟಿಗಿಂತಲೂ ಹೆಚ್ಚು ಕೋವಿಡ್ ಲಸಿಕೆ ಡೋಸ್ ಗಳು(1,04,30,063) ಇನ್ನೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಳಿ ಇವೆ. ಇದಲ್ಲದೆ, ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಮತ್ತು ಯುಟಿಗಳು ಹೆಚ್ಚುವರಿಯಾಗಿ 9 ಲಕ್ಷ (9,24,910) ಲಸಿಕೆಗಳನ್ನು ರವಾನಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.
ವ್ಯಾಕ್ಸಿನೇಷನ್ ಸಾಂಕ್ರಾಮಿಕ ರೋಗದ ನಿಯಂತ್ರಣ ಮತ್ತು ನಿರ್ವಹಣೆ(ಟೆಸ್ಟ್, ಟ್ರ್ಯಾಕ್, ಟ್ರೀಟ್ ಮತ್ತು ಕೋವಿಡ್ ಸೂಕ್ತ ವರ್ತನೆ ಸೇರಿದಂತೆ) ಐದು ಅಂಶಗಳ ಕಾರ್ಯತಂತ್ರದ ಅವಿಭಾಜ್ಯ ಅಂಗವಾಗಿದೆ ಎಂದು ಸಚಿವಾಲಯ ತಿಳಿಸಿದೆ.
73 ರಾಜ್ಯಗಳನ್ನು ಹೊಂದಿರುವ ಭಾರತದಲ್ಲಿ ಕೊರೋನಾ ಟಾಪ್ 10 ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ದೆಹಲಿ, ಉತ್ತರ ಪ್ರದೇಶ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಹರಿಯಾಣ ಸೇರಿದೆ. ಇನ್ನು ಕಳೆದ 24 ಗಂಟೆಯಲ್ಲಿ ಭಾರತದಲ್ಲಿ ಹೊಸದಾಗಿ 3,66,161 ಕೊರೋನಾ ಪ್ರಕರಣಗಳೂ ಪತ್ತೆಯಾಗಿದ್ದು ಇದರಲ್ಲಿ ಈ ರಾಜ್ಯಗಳಲ್ಲೇ ಶೇ 91ರಷ್ಟು ವರದಿಯಾಗುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ನಿನ್ನೆ 48,401 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ ಕರ್ನಾಟಕದಲ್ಲಿ 47,930 ವರದಿಯಾಗಿದೆ. ಇನ್ನು ಕೇರಳದಲ್ಲಿ 35,801 ಹೊಸ ಪ್ರಕರಣಗಳು ದಾಖಲಾಗಿವೆ. ಭಾರತದ ಒಟ್ಟು ಕೋವಿಡ್ ಸಕ್ರಿಯ ಪ್ರಕರಣಗಳು ಸಂಖ್ಯೆ 37,45,237 ತಲುಪಿದೆ. ಈಗ ದೇಶದ ಒಟ್ಟು ಸೋಂಕುಗಳಲ್ಲಿ ಶೇಕಡಾ 16.53 ರಷ್ಟಿದೆ.
ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ರಾಜಸ್ಥಾನ, ಆಂಧ್ರಪ್ರದೇಶ, ಗುಜರಾತ್, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಹರಿಯಾಣ, ಬಿಹಾರ ಮತ್ತು ಮಧ್ಯಪ್ರದೇಶಗಳಲ್ಲಿ ಭಾರತದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇಕಡಾ 82.89 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.