ಉಡುಪಿ: 855 ಮಂದಿಗೆ ಪಾಸಿಟಿವ್ ದೃಢ-ಮೂವರ ಬಲಿ, 642 ಮಂದಿ ಡಿಸ್ಚಾರ್ಜ್
ಉಡುಪಿ ಮೇ 10 (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮದ ನಡುವೆಯೂ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಾ ಇದೆ.
ಜಿಲ್ಲೆಯಲ್ಲಿ ಇಂದು 855 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಪೈಕಿ ಉಡುಪಿ 452, ಕುಂದಾಪುರ 369, ಕಾರ್ಕಳ 30 ಹಾಗೂ ಹೊರ ಜಿಲ್ಲೆಯ ನಾಲ್ವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 6,582 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 3 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಇಬ್ಬರು ಮಹಿಳೆಯರು ಹಾಗೂ ಓರ್ವ ವ್ಯಕ್ತಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ
ಮೇ. 9 ರಂದು 642 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು ಈ ವರೆಗೆ ಒಟ್ಟು 33,915 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 5,31,012 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 40,733 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು236 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಮತ್ತೆ 1175 ಮಂದಿಗೆ ಸೋಂಕು ದೃಢಪಟ್ಟಿದೆ. 985 ಮಂದಿ ಸೋಮವಾರದಂದು ಗುಣಮುಖರಾಗಿ ಹೊರ ಬಂದಿದ್ದು, 12742 ಮಂದಿ ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐವರು ಸೋಂಕಿಗೆ ಬಲಿಯಾಗಿದ್ದಾರೆ