ಉಡುಪಿ: ರೋಗಿಗಳ ಆರೋಗ್ಯ ಸ್ಥಿತಿಯ ಮಾಹಿತಿ ಕಲೆ ಹಾಕಲು ‘ಕ್ವಾರಂಟೈನ್ ವಾಚ್ ಆಪ್’

ಉಡುಪಿ ಮೇ.11(ಉಡುಪಿ ಟೈಮ್ಸ್ ವರದಿ): ಕೊರೋನಾ ಸೋಂಕಿ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ  ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಕ್ವಾರಂಟೈನ್ ವ್ಯವಸ್ಥೆ ಬಗ್ಗೆ ಹಾಗೂ ಅಲ್ಲಿರುವ ರೋಗಿಗಳ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ಕಲೆ ಹಾಕುವ ಸಲುವಾಗಿ ಕ್ವಾರಂಟೈನ್ ವಾಚ್ ಆಪ್ ಆರಂಭಿಸಲಾಗಿದೆ.

ಇದೀಗ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ವಾರಂಟೈನ್ ವಾಚ್ ಆಪ್ ನಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಈ ಸಿಬ್ಬಂದಿಗಳು  ಸೋಂಕು ಹರಡುವಿಕೆ ತಡೆಗಟ್ಟುವ ಉದ್ದೇಶಕ್ಕಾಗಿ ಉಡುಪಿ ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಕೋವಿಡ್ -19 ರ ವೈರಾಣು ಸೋಂಕಿತ ವ್ಯಕ್ತಿಗಳ ಹಾಗೂ ಪ್ರಾಥಮಿಕ ಸಂಪರ್ಕ ಹೊಂದಿರುವ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಫೋಟೋ ತೆಗೆದು ವಿವರವನ್ನು ಕ್ವಾರಂಟೈನ್ ವಾಚ್ ಅಪ್ ನಲ್ಲಿ ಪ್ರತಿದಿನ ದಾಖಲಿಸಬೇಕಾಗಿರುತ್ತದೆ ಹಾಗೂ ಇವರಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಅಂತವರ ಮಾಹಿತಿಯನ್ನು ಕೂಡಲೇ ಸಂಬಂಧಿಸಿದ ನೋಡಲ್ ಅಧಿಕಾರಿ, ಕಾರ್ಯನಿರ್ವಹಣಾಧಿಕಾರಿ ಹಾಗೂ ತಹಶೀಲ್ದಾರರಿಗೆ ನೀಡಬೇಕು. ಹಾಗೂ ಈ ಸಿಬ್ಬಂದಿ ಗಳು,ಸೋಂಕಿತ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಬೆಳಿಗ್ಗೆ 9 ಗಂಟೆಯ ಒಳಗೆ ಕ್ವಾರಂಟೈನ್ ವಾಚ್ ಆಫ್ ನಲ್ಲಿ ಮಾಹಿತಿ ಅಪ್ಲೋಡ್ ಮಾಡುವಂತೆ ಹಾಗೂ ಕ್ವಾರಂಟೈನ್ ವ್ಯಕ್ತಿಗಳ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸುವುದು ಕ್ವಾರಂಟೈನ ಮಹತ್ವದ ಬಗ್ಗೆ ತಿಳಿ ಹೇಳುವುದು.

50 ವರ್ಷ ಮೇಲ್ಪಟ್ಟವರಿಗೆ ಹಾಗೂ ಕೋರೋನದ ಲಕ್ಷಣಗಳು ಕಂಡುಬಂದವರಿಗೆ ಪರೀಕ್ಷೆ ಮಾಡಿಸಿಕೊಳ್ಳಲು ತಿಳಿಸಬೇಕು. ಸಿಬ್ಬಂದಿ ಗಳು ತಮ್ಮ ಕಾರ್ಯದಲ್ಲಿ ವಿಳಂಬಕ್ಕೆ ಆಸ್ಪದ ನೀಡದೆ ಕರ್ತವ್ಯ ನಿರ್ವಹಿಸಲು ಸೂಚಿಸಿದೆ.  ತಪ್ಪಿದಲ್ಲಿ ಕರ್ತವ್ಯ ಲೋಪವೆಸಗಿರುವ ಬಗ್ಗೆ ಸಿಬ್ಬಂದಿಗಳನ್ನೇ  ನೇರ ಹೊಣೆಗಾರರನ್ನಾಗಿ ಮಾಡಿ  ಕರ್ನಾಟಕ ಎಪಿಡಮಿಕ್ ಡಿಸೀಸ್ ಆಕ್ಟ್ 2020 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!