ಉಡುಪಿ: 1084 ಕೋವಿಡ್ ಪಾಸಿಟಿವ್- ಸಕ್ರಿಯ ಪ್ರಕರಣಗಳ ಸಂಖ್ಯೆ 6,876ಕ್ಕೆ ಏರಿಕೆ, ಮೂವರ ಮೃತ್ಯು

ಉಡುಪಿ ಮೇ 11(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಜಿಲ್ಲೆಯಲ್ಲಿ ಇಂದು 1084 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ಈ ಪೈಕಿ ಉಡುಪಿಯಲ್ಲಿ 519, ಕುಂದಾಪುರ 388, ಕಾರ್ಕಳ 169 ಹಾಗೂ ಹೊರ ಜಿಲ್ಲೆಯ 8 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ  ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 6,876 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 3 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಓರ್ವ ಮಹಿಳೆ ಹಾಗೂ ಕುಂದಾಪುರದ ಇಬ್ಬರು ಸೋಂಕಿನಿಂದ ಪ್ರಾಣಕಳೆದುಕೊಂಡಿದ್ದಾರೆ.

ಮೇ. 10 ರಂದು 787 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು ಈ ವರೆಗೆ ಒಟ್ಟು 34,702 ಮಂದಿ ಗುಣಮುಖರಾಗಿದ್ದಾರೆ. ಮೇ. 10 ರ ವೇಳೆಗೆ ಜಿಲ್ಲೆಯಲ್ಲಿ  ಒಟ್ಟು 5,34,106 ಮಂದಿಯನ್ನು ಕೋವಿಡ್  ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 41,817 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು239 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!