ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ: ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್​ಡೌನ್​ ಜಾರಿ ಮಾಡಲಾಗಿದ್ದು, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪೊಲೀಸರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಟ್ವಿಟರ್​​ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆಯುಕ್ತರು, ಓರ್ವ ವ್ಯಕ್ತಿಯನ್ನು ಸುತ್ತುವರೆದು ಪೊಲೀಸರು ಹೊಡೆಯುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದು, ಮಹಿಳೆಯೊಬ್ಬರು ಕರ್ನಾಟಕ ಲಾಕ್​ಡೌನ್ ಸಮಯದಲ್ಲಿ ನಡೆದಿರುವ ಘಟನೆ ಎಂದು ಶೇರ್​ ಮಾಡಿದ್ದಾರೆ. ಆದರೆ, ಇದು ಕಳೆದ ವರ್ಷ ಏ.3 ರಂದು ಮುಂಬೈನಲ್ಲಿ ನಡೆದ ಘಟನೆ. ಇಂತಹ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಈ ರೀತಿ ಪ್ರಚೋದನಾತ್ಮಕ ಸುದ್ದಿಗಳಿಂದ ದಿಕ್ಕು ತಪ್ಪಬಾರದು. ಯಾವುದೇ ಸುದ್ದಿಯ ನೈಜತೆಯನ್ನು ಮೊದಲು ಪರಿಶೀಲಿಸಬೇಕು. ಸುದ್ದಿ ಪರಿಶೀಲಿಸಿ ಶೇರ್ ಮಾಡಿ ಎಂದು ಆಯುಕ್ತರು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!