| ಉಡುಪಿ ಮೇ 12 (ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಒಂದೇ ಸಮನೆ ಹೆಚ್ಚಾಗುತ್ತಲೇ ಇದೆ. ಜಿಲ್ಲೆಯಲ್ಲಿ ಇಂದು 919 ಕೋವಿಡ್ ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿದೆ. ಈ ಪೈಕಿ ಉಡುಪಿಯಲ್ಲಿ 576, ಕುಂದಾಪುರ 257, ಕಾರ್ಕಳ 83 ಹಾಗೂ ಹೊರ ಜಿಲ್ಲೆಯ ಮೂವರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.
ಈ ಮೂಲಕ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 6,952 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 6 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಇಬ್ಬರು ವ್ಯಕ್ತಿಗಳು ಹಾಗೂ ಓರ್ವ ಮಹಿಳೆ ಮತ್ತು ಕುಂದಾಪುರದ ಮೂವರು ವ್ಯಕ್ತಿಗಳು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಮೇ. 11 ರಂದು 837 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು ಈ ವರೆಗೆ ಒಟ್ಟು 35,539 ಮಂದಿ ಗುಣಮುಖರಾಗಿದ್ದಾರೆ. ಮೇ. 11 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,37,062 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 42,736 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು245 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. | |