ಕುಂದಾಪುರ: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಕುಂದಾಪುರ ಮೇ.13(ಉಡುಪಿ ಟೈಮ್ಸ್ ವರದಿ): ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

ರಮೇಶ (55) ಮೃತಪಟ್ಟವರು. ಇವರು ಮೇ.7 ರಂದು ಬೆಳಿಗ್ಗೆ ಮನೆಯಲ್ಲಿ ವಿಷ ಪದಾರ್ಥವನ್ನು ಸೇವಿಸಿ ನರಳಾಡುತ್ತಿದ್ದರು. ಈ ವೇಳೆ ಅವರನ್ನು ಚಿಕಿತ್ಸೆಗೆಂದು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆಸ್ಪತ್ರೆ ಯಲ್ಲಿ ಅವರನ್ನು ಪರೀಕ್ಷಿಸಿದ  ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲು ಮಾಡುವಂತೆ ತಿಳಿಸಿದ್ದರು.

ಅದರಂತೆ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಮೇ.12 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರಮೇಶ ಅವರು ಅಂಗವಿಕಲರಾಗಿದ್ದು ಇದೇ ಕಾರಣದಿಂದ ಜೀವನದಲ್ಲಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!