ಕೋವಿಡ್ ಲಸಿಕೆ ಬಗ್ಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಜನತೆಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ಬಡವರಿಗೆ, ನಿರ್ಗತಿಕರಿಗೆ ಬಹಳ ಸಮಸ್ಯೆಯಾಗಿದೆ, ರಾಜ್ಯ ಸರಕಾರ ಅವರತ್ತ ಗಮನಹರಿಸಬೇಕು, ಹಣಕಾಸು ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ವಿಧಾನ ಸೌಧ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಸಲೀಮ್ ಅಹ್ಮದ್, ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಮೊದಲಾದವರು ನಿನ್ನೆ ವಿಧಾನ ಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ರಾಜ್ಯ ಸರ್ಕಾರ ಪರಿಣಾಮಕಾರಿಯಾಗಿ ಕೆಲಸ ಮಾಡಲು ವಿಫಲವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಬಗ್ಗೆ ಅಸಡ್ಡೆ ವಹಿಸಿದ್ದು ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಕೂಡ ಪರಿಣಾಮಕಾರಿಯಾಗಿ ಎದುರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರು ಲಸಿಕೆ ತೆಗೆದುಕೊಳ್ಳಬಹುದೆಂದು ಘೋಷಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರು ಜನರ ಹಾದಿ ತಪ್ಪಿಸಿದ್ದಾರೆ. 45ರಿಂದ 60 ವರ್ಷದವರೆಗಿನವರಿಗೆ ನೀಡಲು ಸರ್ಕಾರದ ಬಳಿ ಸಾಕಷ್ಟು ಕೊರೋನಾ ಲಸಿಕೆಯಿಲ್ಲದಿರುವಾಗ 45 ವರ್ಷಕ್ಕಿಂತ ಕೆಳಗಿನವರಿಗೆ ಸರ್ಕಾರ ಅಷ್ಟು ತರಾತುರಿಯಲ್ಲಿ ಘೋಷಿಸಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!