892 ಪಾಸಿಟಿವ್, ಉಡುಪಿಯ ಐವರು, ಕುಂದಾಪುರದ ಓರ್ವ ಮಹಿಳೆ ಬಲಿ

ಉಡುಪಿ ಮೇ 13(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಹೊಸದಾಗಿ ಪತ್ತೆಯಾಗುತ್ತಿರುವ  ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಜೊತೆಗೆ ಸಕ್ರಿಯ ಪ್ರಕರಣಗಳಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ.

ಜಿಲ್ಲೆಯಲ್ಲಿ ಇಂದು 892 ಕೋವಿಡ್ ಪಾಸಿಟಿವ್ ಪ್ರಕರಣ ಗಳು ಪತ್ತೆಯಾಗಿದೆ. ಈ ಪೈಕಿ ಉಡುಪಿಯಲ್ಲಿ 222, ಕುಂದಾಪುರ 314, ಕಾರ್ಕಳ 349 ಹಾಗೂ ಹೊರ ಜಿಲ್ಲೆಯ 7 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.

ಈ ಮೂಲಕ  ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 7108 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 6 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಇಬ್ಬರು ವ್ಯಕ್ತಿಗಳು ಹಾಗೂ ಮೂವರು ಮಹಿಳೆಯರು ಮತ್ತು ಕುಂದಾಪುರದ ಓರ್ವ ಮಹಿಳೆ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಮೇ.12 ರಂದು 730 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು ಈ ವರೆಗೆ ಒಟ್ಟು 36,269 ಮಂದಿ ಗುಣಮುಖರಾಗಿದ್ದಾರೆ. ಮೇ. 12 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,39,392 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 43,628 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 251 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!