ಉಡುಪಿ-ದ.ಕ: ಚಂಡಮಾರುತದ ಅಬ್ಬರಕ್ಕೆ ಮೇ.15 -16 ‘ರೆಡ್ ಅಲರ್ಟ್’

ಉಡುಪಿ ಮೇ.13(ಉಡುಪಿ ಟೈಮ್ಸ್ ವರದಿ): ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ‘ತೌಕೆ’ ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಅಬ್ಬರಿಸಲಿರುವ ಭಾರೀ ಗಾಳಿ ಮಳೆಗೆ ಮುಂಜಾಗೃತಾ ಕ್ರಮವನ್ನು ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಪ್ರಕಟಣೆ ಹೊರಡಿಸಿದ್ದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ತೌಕೆ‌ ಚಂಡಮಾರುತ ಉಂಟಾಗಿರುವ ಪರಿಣಾಮ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಾಮನ್ಯಕ್ಕಿಂತ ಹೆಚ್ಚಿನ ಗಾಳಿ ಮಳೆಯಾಗುವ ಸಾಧ್ಯತೆಯಿದೆಯೆಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.

ಅದರಂತೆ ಜಿಲ್ಲೆಯಲ್ಲಿ ಮೇ14 ರಂದು ಆರೆಂಜ್ ಅಲರ್ಟ್ ಮತ್ತು ಮೇ.15 ರಿಂದ ಮೇ.16 ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮತ್ತು ಮೇ.17 ರಿಂದ ಮೇ.18 ರ ಬೆಳಿಗ್ಗೆ 8.30ರ ವರೆಗೆ ಆರೆಂಜ್ ಅಲರ್ಟ್ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೂ ಈ ಅವಧಿಯಲ್ಲಿ ಗುಡುಗು, ಸಿಡಿಲು ಸಹಿತ ಬಿರುಸಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ವಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಕೆಲವು ಸೂಚನೆಗಳನ್ನು ನೀಡಿದೆ ಅದರಂತೆ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು‌, ನಿಯೋಜನಗೊಂಡ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು,ವಿಕೋಪವನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು ಮೀನುಗಾರರು ನದಿ,‌ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಹಾಗೂ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಅಥವಾ ಇವುಗಳ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳಿಗೆ ತಲುಪುವಂತೆ ಸೂಚನೆ ನೀಡಲಾಗಿದೆ. ಇನ್ನು ಯಾವುದೇ ತುರ್ತು ಸೇವೆಗೆ ಶುಲ್ಕರಹಿತ ಸಂಖ್ಯೆ 1077 ಹಾಗೂ ದೂರವಾಣಿ ಸಂಖ್ಯೆ: 0820-2574802 ಅನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.

2 thoughts on “ಉಡುಪಿ-ದ.ಕ: ಚಂಡಮಾರುತದ ಅಬ್ಬರಕ್ಕೆ ಮೇ.15 -16 ‘ರೆಡ್ ಅಲರ್ಟ್’

Leave a Reply

Your email address will not be published. Required fields are marked *

error: Content is protected !!