ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 34,057 ಮಂದಿ ಸೋಂಕಿನಿಂದ ಮುಕ್ತರಾಗಿ ಮನೆಗೆ

ಬೆಂಗಳೂರು: ರಾಜ್ಯದಲ್ಲಿ ಗುರುವಾರದ ಕೋವಿಡ್ ಸ್ಥಿತಿಗತಿಯನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 34,057 ಮಂದಿ ಕೋವಿಡ್ ಸೋಂಕಿನಿಂದ ಮುಕ್ತರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ ಎಂದು ಹೇಳಿದೆ.

ಗುರುವಾರದ ಲೆಕ್ಕಾಚಾರದ ಜತೆಗೆ ಈವರೆಗೆ ಒಟ್ಟು 14,74,678 ಮಂದಿ ಆಸ್ಪತ್ರೆಯಿಂದ ಕೋವಿಡ್ ಮುಕ್ತರಾಗಿ ಬಿಡುಗಡೆ ಯಾಗಿದ್ದಾರೆ.

ಇಂದು ಒಟ್ಟು 35,297 ಹೊಸ ಪ್ರಕರಣ ವರದಿಯಾಗಿದ್ದು, ರಾಜ್ಯದಲ್ಲಿ 5,93,078 ಸಕ್ರಿಯ ಪ್ರಕರಣಗಳಿವೆ. ಅಲ್ಲದೆ, ಈ ದಿನ ಒಟ್ಟು 344 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ 15,191 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 16,084 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 161 ಸಾವು ವರದಿಯಾಗಿದೆ. 

ಮಹಾಮಾರಿಗೆ ಗುರುವಾರ ಒಂದೇ ದಿನ ಬರೋಬ್ಬರಿ 344 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 20712ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 35,297 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 20,88,488ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!