ಕುಂದಾಪುರ: ಆತ್ಮಹತ್ಯೆಗೆ ಯತ್ನಿಸಿದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಕುಂದಾಪುರ ಮೇ.14(ಉಡುಪಿ ಟೈಮ್ಸ್ ವರದಿ): ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ.
ಪವಿತ್ರ(17) ಮೃತಪಟ್ಟವರು, ಇವರು ಯಾವುದೋ ವೈಯುಕ್ತಿಕ ಕಾರಣದಿಂದ ಮನನೊಂದು ಮೇ.12 ರಂದು ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು.
ಈ ವೇಳೆ ಅಸ್ವವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗೆಂದು ಕುಂದಾಪುರದ ಆತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಮೇ.13 ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.