| ದ.ಕ, ಮೇ.14(ಉಡುಪಿ ಟೈಮ್ಸ್ ವರದಿ): ಮಂಗಳೂರಿನಲ್ಲಿ ಪೊಲೀಸ್ ಪೇದೆಯೊಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಮಂಗಳೂರಿನಲ್ಲಿ ಸಿಎಆರ್ ವಿಭಾಗದಲ್ಲಿ ಸೇವೆಯಲ್ಲಿದ್ದ ಬೆಳಗಾವಿ ಮೂಲದ ಸಿದ್ದಪ್ಪ ಶಿಂಗೆ (50)ಮೃತಪಟ್ಟವರು. ಕೋವಿಡ್ ಎರಡೂ ಲಸಿಕೆಯನ್ನು ಪಡೆದಿದ್ದ ಸಿದ್ದಪ್ಪ ಶಿಂಗೆ ಅವರನ್ನು ಮೇ 5ರಂದು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆರಂಭದಲ್ಲೇ ಆಕ್ಸಿಜನ್ ಕೊಟ್ಟು ಚಿಕಿತ್ಸೆ ನೀಡಲಾಗಿತ್ತು. ಆದರೆ, ದೇಹಸ್ಥಿತಿ ಬದಲಾವಣೆ ಆಗದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇವರು ಮೂಲತಃ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯರ್ನಾಳ್ ಎಂಬ ಊರಿನವರು. ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಬಳಿಕ 2016ರಲ್ಲಿ ಪೊಲೀಸ್ ಇಲಾಖೆ ಸೇರಿದ್ದರು. ಮಂಗಳೂರಿನಲ್ಲಿ ಸಿಎಆರ್ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸಿದ್ದಪ್ಪ ಅವರಿಗೆ ಬೇರಾವುದೇ ಕಾಯಿಲೆಗಳು ಇರಲಿಲ್ಲ. ಹಾಗಿದ್ದರೂ ಸಾವಿನ ಸಂದರ್ಭದಲ್ಲಿ ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಕೋವಿಡ್ ಎರಡನೇ ಅಲೆಯಲ್ಲಿ ಮೊದಲ ಬಾರಿಗೆ ಪೊಲೀಸ್ ಪೇದೆಯೊಬ್ಬರು ಸೋಂಕಿಗೆ ಬಲಿಯಾಗಿ ರುವುದು ವರದಿಯಾಗಿದೆ. | |