ಸಿಎಂ ಬಿಎಸ್‌ವೈ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ಕೊರೋನಾಗೆ ಬಲಿ
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಾಜಿ ಮಾಧ್ಯಮ ಸಲಹೆಗಾರ, ಹಿರಿಯ ಪತ್ರಕರ್ತ ಮಹಾದೇಶ ಪ್ರಕಾಶ್ ಅವರು ಕೊರೋನಾಗೆ ಬಲಿಯಾಗಿದ್ದಾರೆ.
65 ವರ್ಷದ ಮಹಾದೇವ ಪ್ರಕಾಶ್ ಅವರು ಕಳೆದ 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಹಾದೇವ ಪ್ರಕಾಶ್ ಅವರು 1975ರ ಅಕ್ಟೋಬರ್ 15ರಂದು ಲೋಕವಾಣಿ ದಿನ ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಕಾಲಿಟ್ಟಿದ್ದರು. ನಂತರ ರಾಜಕೀಯ ವಿಶ್ಲೇಕರಾಗಿ ಮತ್ತು ಅಂಕಣಕಾರರಾಗಿ ಸೇವೆ ಸಲ್ಲಿಸಿದ್ದ ಅವರು ಬಿಎಸ್ ಯಡಿಯೂರಪ್ಪ ನವರಿಗೆ ಕೆಲ ತಿಂಗಳುಗಳ ಕಾಲ ಮಾಧ್ಯಮ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಿ ರಾಜೀನಾಮೆ ನೀಡಿದ್ದರು.