ಉಡುಪಿ: ಆಯುಷ್ಮಾನ್ ಭಾರತ್ ಚಿಕಿತ್ಸಾ ಸೌಲಭ್ಯ ಶಿಫಾರಸ್ ನೀಡುವ ಅಧಿಕಾರಿ ಬದಲಾವಣೆ

ಉಡುಪಿ ಮೇ.14(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸಾ ಸೌಲಭ್ಯ ಪಡೆಯುವ ಬಗ್ಗೆ ಶಿಫಾರಸ್ ನೀಡುವ ಕಾರ್ಯವನ್ನು ಯಾವುದೇ ಅಡಚಣೆ ಇಲ್ಲದೆ ನಿರ್ವಹಿಸುವ ಸಲುವಾಗಿ ಪ್ರತ್ಯೇಕ ಅಧಿಕಾರಿಯಾಗಿ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಸುರೇಂದ್ರ ಚಿಂಬಳ್ಕರ್ (ದೂ. ಸಂಖ್ಯೆ 9448911425) ಅವರನ್ನು ನೇಮಿಸಲಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಅಧಿಕಾರಿಯನ್ನು ನೇಕಮ ಮಾಡಿ ಆದೇಶ ಹೊರಡಿಸಿದ್ದು, ಅದರಂತೆ ಕೊರೋನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸಾ ಸೌಲಭ್ಯ ಪಡೆಯಲು ಶಿಫಾರಸ್ ನೀಡುವ ಕಾರ್ಯವನ್ನು ಪ್ರಸ್ತುತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ನಿರ್ವಹಿಸುತ್ತಿದ್ದರು. ಆದರೆ, ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೆಲಸದ ಒತ್ತಡ ಬಹಳಷ್ಟು ಹೆಚ್ಚಿರುವುದರಿಂದ ಈ ಒತ್ತಡದ ನಡುವೆ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸಾ ಸೌಲಭ್ಯ ಪಡೆಯುವ ಬಗ್ಗೆ ಶಿಫಾರಸ್ ನೀಡುವ ಕಾರ್ಯವನ್ನು ನಿರ್ವಹಿಸುವುದು ಕಷ್ಟ ಸಾಧ್ಯವಾಗಿರುತ್ತದೆ.

ಆದ್ದರಿಂದ ಕೊರೋನಾ ಸೋಂಕಿತರಿಗೆಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸಾ ಸೌಲಭ್ಯ ಪಡೆಯುವ ಬಗ್ಗೆ ರೆಫರೆನ್ಸ್ ನೀಡುವ ಕಾರ್ಯಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರ ಬದಲಾಗಿ ಮುಂದಿನ ಆದೇಶದವರೆಗೆ ಜಿಲ್ಲಾ ಕುಷ್ಠ ರೋಗ ನಿವಾರಣಾಧಿಕಾರಿ ಸುರೇಂದ್ರ ಚಿಂಬಳ್ಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇನ್ನು ನೇಮಕ ಗೊಂಡ ಅಧಿಕಾರಿಯವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್-19 ಪಾಸಿಟಿವ್ ರೋಗಿಗಳಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸಾ ಸೌಲಭ್ಯ ಪಡೆಯುವ ಬಗ್ಗೆ ಶಿಫಾರಸ್ ನೀಡುವ ಕಾರ್ಯವನ್ನು ನಿಯಮಾನುಸಾರ ನಿರ್ವಹಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!