ಉಡುಪಿ ಮೇ 15(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಇಂದು 1146 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ಈ ಪೈಕಿ ಉಡುಪಿಯಲ್ಲಿ 636 ಕುಂದಾಪುರ 246, ಕಾರ್ಕಳ 255 ಹಾಗೂ ಹೊರ ಜಿಲ್ಲೆಯ 9 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.
ಈ ಮೂಲಕ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 7262ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 7 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ 4 ಮಂದಿ ವ್ಯಕ್ತಿಗಳು ಹಾಗೂ ಮೂವರು ಮಹಿಳೆಯರು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ 35 ವರ್ಷದ ಮಹಿಳೆ ಹಾಗೂ ಯುವಕ ಸೇರಿದ್ದಾರೆ.
ಮೇ.14 ರಂದು 1496 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು ಈ ವರೆಗೆ ಒಟ್ಟು 38471 ಮಂದಿ ಗುಣಮುಖರಾಗಿದ್ದಾರೆ. ಮೇ. 15 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,45,389 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 45,994 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು261 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. | | |