ಕೋವಿಡ್ ಸೋಂಕಿತರು ತಿರುಗಾಡುವುದು ಕಂಡು ಬಂದರೆ ಕ್ರಿಮಿನಲ್ ಮೊಕದ್ದಮೆ: ಜಿಲ್ಲಾಧಿಕಾರಿ

ಉಡುಪಿ ಮೇ.17(ಉಡುಪಿ ಟೈಮ್ಸ್ ವರದಿ): ಕೋವಿಡ್ ಪಾಸಿಟಿವ್ ದೃಢಪಟ್ಟ ಬಳಿಕವೂ ಯಾರಾದರೂ ಸೋಂಕಿತರು ಹೊರಗಡೆ ತಿರುಗಾಡುವುದು ಕಂಡು ಬಂದರೆ ಅಂತವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕಿ ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲು ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಹೇಳಿದ್ದಾರೆ. 

ಕೋವಿಡ್ ಸೋಂಕಿತರು ಸಾರ್ವಜನಿಕ ವಾಗಿ ತಿರುಗಾಡುತ್ತಿದ್ದಾರೆ ಎಂಬ ಮಾಹಿತಿ ಕುರಿತು ಇಂದು ಮಾತನಾಡಿದ ಅವರು. ಜಿಲ್ಲೆಯ 3 ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಯಾರಿಗಾದರೂ ಸೋಂಕು ದೃಢಪಟ್ಟು ಮನೆಯಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೇ ಇದ್ದರೆ  ಅಂತವರು ಕೋವಿಡ್ ಕೇರ್ ಸೆಂಟರ್ ಗೆ ಬಂದರೆ ಅವರ ರಕ್ಷಣೆಗೆ ವ್ಯವಸ್ಥೆ ಮಾಡುವುದು ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ. ಆದ್ದರಿಂದ ಮನೆಯ ಇತರರಿಗೆ ತೊಂದರೆ ಆಗದಂತೆ ಸೋಂಕಿತರು ಕೋವಿಡ್ ಕೇರ್ ಸೆಂಟರ್ ಗೆ ಬಂದು ಚಿಕಿತ್ಸೆ ಪಡೆಯುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!