| ಉಡುಪಿ ಮೇ 17(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಜೊತೆಗೆ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ.
ಇದು ಜಿಲ್ಲೆಯ ಜನತೆಯನ್ನು ಕೊಂಚ ಆತಂಕಕ್ಕೀಡು ಮಾಡಿದೆ. ಜಿಲ್ಲೆಯಲ್ಲಿ ಇಂದು 897 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 388 ಕುಂದಾಪುರ 271 , ಕಾರ್ಕಳ 231 ಹಾಗೂ ಹೊರ ಜಿಲ್ಲೆಯ 7 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.
ಸದ್ಯ ಜಿಲ್ಲೆಯಲ್ಲಿ 6860 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಓರ್ವ ಮಹಿಳೆ ಹಾಗೂ ಇಬ್ಬರು ವ್ಯಕ್ತಿಗಳು ಮತ್ತು ಕುಂದಾಪುರದ ಇಬ್ಬರು ವ್ಯಕ್ತಿಗಳು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೇ.16 ರಂದು ಜಿಲ್ಲೆಯಲ್ಲಿ 837 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರಬಂದಿದ್ದು, ಈ ವರೆಗೆ ಒಟ್ಟು 40505 ಮಂದಿ ಗುಣಮುಖರಾಗಿದ್ದಾರೆ.
ಮೇ. 16 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,49,327 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 47,636 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 271 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕನ್ನು ಪ್ರಮಾಣವನ್ನು ಕಡಿಮೆ ಮಾಡಬೇಕಾದರೆ ಪ್ರತಿಯೊಬ್ಬರೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದು ಅನಿವಾರ್ಯವಾಗಿದೆ. | |