ತೌಕ್ತೆ ಚಂಡಮಾರುತ ಪ್ರಭಾವ ಮತ್ತೆ ‘ಯೆಲ್ಲೊ ಅಲರ್ಟ್’- ಮೀನುಗಾರರಿಗೆ ಎಚ್ಚರಿಕೆ
ಬೆಂಗಳೂರು: ತೌಕ್ತೆ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೇ 19ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದಲ್ಲಿ ಚಂಡಮಾರುತದ ಅಬ್ಬರ ಸ್ವಲ್ಪ ಕಡಿಮೆಯಾದರೂ, ಮುಂದಿನ ಎರಡು ದಿನ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬುಧವಾರದವರೆಗೆ ‘ಯೆಲ್ಲೊ ಅಲರ್ಟ್’ ಮುಂದುವರಿಸಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಮಳೆ ತಗ್ಗಿದ್ದು, ಗುಡುಗು ಮತ್ತು ಸಿಡಿಲು ಹೆಚ್ಚಾಗಿ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಮೇ 22ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದೂ ಮಾಹಿತಿ ನೀಡಿದೆ.
ಮತ್ತೆ ಮೀನುಗಾರರಿಗೆ ಎಚ್ಚರಿಕೆ
ಚಂಡಮಾರುತದ ಪರಿಣಾಮ ಕರಾವಳಿಯಲ್ಲಿ ಗರಿಷ್ಠ 5.0 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ವೇಗವಾದ ಗಾಳಿಯೂ ಬೀಸುತ್ತಿರುವುದರಿಂದ ಮೀನುಗಾರರು ಮೇ 19ರವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.