ಮಣಿಪಾಲ: ನೇಣು ಬಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ
ಮಣಿಪಾಲ ಮೇ.18(ಉಡುಪಿ ಟೈಮ್ಸ್ ವರದಿ): ನೇಣು ಬಿಗಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ. ಅಶ್ವತ್ ಶೆಟ್ಟಿ(30) ಆತ್ಮಹತ್ಯೆ ಮಾಡಿಕೊಂಡವರು.
ಇವರು, ಸುಮಾರು 5 ರಿಂದ 6 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಈ ಬಗ್ಗೆ ಮಣಿಪಾಲದ ಕೆಎಮ್ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಮೇ.15 ರಂದು ಅಶ್ವತ್ ಅವರು ಬಾಳ್ಕಟ್ಟ ಗೋಪಾಲ ಶೆಟ್ಟಿಯವರಿಗೆ ಸಂಬಂಧಿಸಿದ ಪಾಳುಬಿದ್ದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.