ಮಂಗಳೂರು: 7 ತಿಂಗಳ ಗರ್ಭಿಣಿ, ಪ್ರೊಬೆಷನರಿ ಪಿಎಸ್ಐ ಕೋವಿಡ್’ಗೆ ಬಲಿ

ಮಂಗಳೂರು: 7 ತಿಂಗಳ ಗರ್ಭಿಣಿಯಾಗಿದ್ದ ಪ್ರೊಬೆಷನರಿ ಪಿಎಸ್ಐ ಕೋವಿಡ್ ಗೆ ಬಲಿಯಾಗಿರುವ ಘಟನೆ ದ.ಕ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಾಮಿಲಿ(24) ಮೃತಪಟ್ಟವರು.

ಮೂಲತಃ ಕೋಲಾರದವರಾದ ಇವರು ಜನವರಿ 11 ರಂದು ಮಂಗಳೂರು ಎಸ್ಪಿ ಕಚೇರಿಯಲ್ಲಿ ಸೇವೆ ಆರಂಭಿಸಿದ್ದರು. 7 ತಿಂಗಳ ಗರ್ಭಿಣಿಯಾಗಿದ್ದಅವರು, ರಜೆ ತೆಗೆದುಕೊಂಡು ತಮ್ಮ ಊರು ಕೋಲಾರಕ್ಕೆ ತೆರಳಿದ್ದರು.ಗರ್ಭಿಣಿಯಾಗಿದ್ದ ಕಾರಣ ಅವರು ಕೋವಿಡ್ ಲಸಿಕೆ ಪಡೆದುಕೊಂಡಿರಲಿಲ್ಲ ಎನ್ನಲಾಗಿದೆ. ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮೇ 2 ರಂದು ಕೋವಿಡ್ ಚಿಕಿತ್ಸೆಗಾಗಿ ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ 4.30 ರ ಸುಮಾರಿಗೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. 

ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ಅವರು, ಪೊಲೀಸ್ ಕುಟುಂಬದಲ್ಲಿ ಕಿರಿಯ ಸದಸ್ಯರಾಗಿರುವ ಶಾಮಿಲಿ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಎಲ್ಲರೂ ಕೋವಿಡ್ ನಿಯಮ ಪಾಲಿಸಿ ಪೊಲೀಸರೊಂದಿಗೆ ಸಹಕರಿಸಿ, ಸುರಕ್ಷಿತವಾಗಿರಿ ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!