ಉಡುಪಿ: 737 ಮಂದಿಯಲ್ಲಿ ಪಾಸಿಟಿವ್, ನಾಲ್ವರ ಮೃತ್ಯು- 1095 ಗುಣಮುಖ

ಉಡುಪಿ ಮೇ18 (ಉಡುಪಿ ಟೈಮ್ಸ್ ವರದಿ): ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವುದು ಕಂಡು ಬಂದಿದೆ. ಜಿಲ್ಲೆಯಲ್ಲಿ ಇಂದು 737 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಈ ಪೈಕಿ ಉಡುಪಿಯಲ್ಲಿ 380 , ಕುಂದಾಪುರ 294, ಕಾರ್ಕಳ 59 ಹಾಗೂ ಹೊರ ಜಿಲ್ಲೆಯ 4 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 6498 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ 4 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಇಬ್ಬರು ವ್ಯಕ್ತಿಗಳು ಹಾಗೂ ಕುಂದಾಪುರದ ಇಬ್ಬರು ಮಹಿಳೆಯರು ಸೋಂಕಿನಿಂದ ಪ್ರಾಣ ಕಳೆದು ಕೊಂಡಿದ್ದಾರೆ. ಮೇ 17 ರಂದು ಜಿಲ್ಲೆಯಲ್ಲಿ 1095 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 41,600 ಮಂದಿ ಗುಣಮುಖರಾಗಿದ್ದಾರೆ.

ಮೇ. 17ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,52,152 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 48,373 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 275 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಇಳಿಕೆಯಾಗುತ್ತಿವೆಯಾದರೂ ಈ ಬಗ್ಗೆ ನಿರ್ಲಕ್ಷ್ಯ ವಹಿಸುವಂತಿಲ್ಲ.    ಪ್ರತಿಯೊಬ್ಬರೂ ಕೋವಿಡ್ ಮಾರ್ಗ ಸೂಚಿಗಳನ್ನು ಪಾಲಿಸುವ ಮೂಲಕ ಕೋವಿಡ್ ಮುಕ್ತ ಜಿಲ್ಲೆಯ ನಿರ್ಮಾಣಕ್ಕೆ ಕೈ ಜೋಡಿಸಬೇಕಾಗಿದೆ.

Leave a Reply

Your email address will not be published. Required fields are marked *

error: Content is protected !!