ಉಡುಪಿ: ಲಾಕ್ ಡೌನ್ ಉಲ್ಲಂಘಿಸುವ ವಿರುದ್ದ ಖುದ್ದು ಕಾರ್ಯಾಚರಣೆಗೆ ಇಳಿದ ಡಿಸಿ
ಉಡುಪಿ ಮೇ.19(ಉಡುಪಿ ಟೈಮ್ಸ್ ವರದಿ): ಕೋವಿಡ್ ನಿಯಂತ್ರಣದ ಹಿನ್ನೆಲೆ ಸರಕಾರ ಜಾರಿ ಮಾಡಿರುವ ಲಾಕ್ ಡೌನ್ ನಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಸೂಚಿಸಿರುವ ಅವಧಿಯ ನಂತರವೂ ಸಾರ್ವಜನಿಕರು ಓಡಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಫೀಲ್ಡ್ ಗೆ ಇಳಿದು ಕಾರ್ಯಾಚರಣೆ ನಡೆಸಿದರು.
ಇಂದು ಬೆಳಿಗ್ಗೆ ನಗರದ ಮಸೀದಿ ರಸ್ತೆ, ಸಿಟಿ ಬಸ್ ನಿಲ್ದಾಣ, ಕೋರ್ಟ್ ರೋಡ್, ಮಲ್ಪೆ ಮುಖ್ಯರಸ್ತೆಗೆ ಏಕಾಏಕಿ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ನಗರದಲ್ಲಿ ತೆರೆದುಕೊಂಡಿದ್ದ ಬೇಕರಿ ಮತ್ತು ಐಸ್ ಕ್ರೀಂ ಪಾರ್ಲರ್ ಗಳು ತೆರೆಯಲು ಅವಕಾಶ ಇರುವುದಿಲ್ಲ ಎಂದು ಸೂಚನೆ ನೀಡಿ ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಸಲಹೆ ನೀಡಿದರು.
ಇದರೊಂದಿಗೆ ನಗರದಲ್ಲಿ ಬಹುತೇಕ ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಯಿತು, ಅನಗತ್ಯವಾಗಿ ಓಡಾಟ ನಡೆಸುತ್ತಿದ್ದ ವಾಹನ ಸವಾರರಿಗೆ ದಂಡ ವಿಧಿಸುವ ಮೂಲಕ ಕಡಿವಾಣ ಹಾಕಲಾಯಿತು. ಅಲ್ಲದೆ ರಸ್ತೆಯಲ್ಲಿ ಓಡಾಟ ನಡೆಸುತ್ತಿದ್ದ ಜನರನ್ನು ಚದುರಿಸಿದ್ದು, ಎಲ್ಲಾ ಚೆಕ್ ಪೋಸ್ಟ್ ಗಳನ್ನು ಅಲರ್ಟ್ ಮಾಡಲಾಗಿದೆ.
ಸರಕಾರ ಜಾರಿ ಮಾಡಿರುವ ಲಾಕ್ ಡೌನ್ ನನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ನೀಡಲಾಗಿದೆ. ಅದರಂತೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ಗಂಟೆ ಯಿಂದ 10 ಗಂಟೆ ವರೆಗೆ ಮಾತ್ರ ಅವಕಾಶ ನೀಡಲಾಗಿದೆ.
ಅಲ್ಲದೆ ಅಗತ್ಯ ವಸ್ತುಗಳ ಖರೀದಿಗೆ ಮನೆಯ ಸಮೀಪದ ಅಂಗಡಿ ತೆರಳಿ ಸಾಮಾಗ್ರಿಗಳನ್ನು ಖರೀದಿಸಬೇಕು ಇಲ್ಲವಾದಲ್ಲಿ ವಾಹನ ಸೀಝ್ ಮಾಡುವುದಾಗಿ ನಿನ್ನೆಯೇ ಜಿಲ್ಲಾಧಿಕಾರಿ ಖಡಕ್ ಸೂಚನೆ ನೀಡಿದ್ದರು. ಅದಾಗ್ಯೂ ನಿಯಮ ಉಲ್ಲಂಘನೆಯನ್ನು ನಿಯಂತ್ರಿಸುವ ಸಲುವಾಗಿಇಂದು ಜಿಲ್ಲಾಧಿಕಾರಿ ಧಿಡೀರ್ ಕಾರ್ಯಾಚರಣೆ ಗೆ ಇಳಿದಿದ್ದಾರೆ.
ಇನ್ನು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು ಕರಾವಳಿ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸಿ ಅನಗತ್ಯವಾಗಿ ತಿರುಗಾಡುತ್ತಿದ್ದ ವಾಹನ ಸವಾರರಿಗೆ ದಂಡ ವಿಧಿಸಿದ್ದಾರೆ.
Hehe he came to our shop at 9am closing time is 10 . The information is totally wrong worst DC. Is wine shop is more important than flower shop? Funny
Let D.c.visit Ambagilu Manipal road even after 10 a.m
Coconut shop is doing unabated business overthrowing all corona safety conditions
Hoysala moving on just front of shop is blind.they target only poor shop people