ಸಾಲಗಾರರಿಗೆ ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಬೆಂಗಳೂರು ಮೇ.19: ಪಿಎಲ್ ಡಿ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್ ಗಳಿಂದ ಪಡೆದ ಕೃಷಿ ಸಾಲದ ಮರುಪಾವತಿ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಮಹತ್ವದ ಘೋಷಣೆಯನ್ನು ಮಾಡಿದ್ದು, ಅದರಂತೆ ಪಿಎಲ್ ಡಿ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್ ಗಳಿಂದ ಪಡೆದ ಕೃಷಿ ಸಾಲದ ಮರುಪಾವತಿ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ. ಸರಕಾರದ ಈ ನಿರ್ಧಾರದಿಂದ ಲಕ್ಷಾಂತರ ರೈತರಿಗೆ ಅನುಕೂಲ ವಾಗಲಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.
ಇನ್ನು ಈಗಾಗಲೇ ರಾಜ್ಯದಲ್ಲಿ ಲಕ್ಷಾಂತರ ರೈತರು ಸಾಲ ಮರುಪಾವತಿ ಮಾಡಲಾಗದೆ ಸಮಸ್ಯೆಗೆ ಸಿಲುಕಿದ್ದು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.