ಮೇ20- 812 ಮಂದಿಯಲ್ಲಿ ಪಾಸಿಟಿವ್: ಉಡುಪಿಯ ನಾಲ್ವರು,ಕಾರ್ಕಳದ ಓರ್ವ ಮೃತ್ಯು

ಉಡುಪಿ ಮೇ 20(ಉಡುಪಿ ಟೈಮ್ಸ್ ವರದಿ): ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ‌ಸಕ್ರಿಯ ಪ್ರಕರಣ ಗಳ ಸಂಖ್ಯೆ ಇಳಿಮುಖ ಆಗುತ್ತಿದೆ.

ಜಿಲ್ಲೆಯಲ್ಲಿ ಇಂದು 812 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.ಈ ಪೈಕಿ ಉಡುಪಿಯಲ್ಲಿ 383, ಕುಂದಾಪುರ 211, ಕಾರ್ಕಳ 206 ಹಾಗೂ ಹೊರ ಜಿಲ್ಲೆಯ 12 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 6,335 ಕೋವಿಡ್ ಸಕ್ರಿಯ ಪ್ರಕರಣಗಳಿವೆ. 

ಇಂದು ಜಿಲ್ಲೆಯಲ್ಲಿ 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ  ಮೂವರು ವ್ಯಕ್ತಿಗಳು ಹಾಗೂ ಓರ್ವ ಮಹಿಳೆ ಮತ್ತು ಕಾರ್ಕಳದ ಓರ್ವ ವ್ಯಕ್ತಿ  ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೇ.19 ರಂದು ಜಿಲ್ಲೆಯಲ್ಲಿ 914  ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು,ಈ ವರೆಗೆ ಒಟ್ಟು 43,427 ಮಂದಿ ಗುಣಮುಖ ರಾಗಿದ್ದಾರೆ.

ಮೇ.19 ರವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,56,786 ಮಂದಿಯನ್ನು ಕೋವಿಡ್ ಟೆಸ್ಟ್ಗೆ ಒಳಪಡಿಸಿದ್ದು,ಈ ಪೈಕಿ 50048 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 286 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಂದೆಡೆ ಕೋವಿಡ್ ಸಕ್ರಿಯ ಪ್ರಕರಣಗಳು ಇಳಿಮುಖ ಆಗುತ್ತಿದ್ದೆ. ಆದರೆ ಮತ್ತೊಂದೆಡೆ ಸೋಂಕಿನಿಂದ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಜಾಗರೂಕರಾಗಿರುವಂತೆ ಎಚ್ಚರಿಕೆಯ ಕರೆಗಂಟೆ ನೀಡುತ್ತಿದೆ.

Leave a Reply

Your email address will not be published. Required fields are marked *

error: Content is protected !!