ಮಲ್ಪೆ: ಲಾಕ್ ಡೌನ್’ಗೆ ನೊಂದು ಟೈಲರ್ ಆತ್ಮಹತ್ಯೆ

ಮಲ್ಪೆ ಮೇ.21(ಉಡುಪಿ ಟೈಮ್ಸ್ ವರದಿ): ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯಲ್ಲಿ ನಡೆದಿದೆ. 

ಹರೀಶ ದೇವಾಡಿಗ (45) ಆತ್ಮಹತ್ಯೆ ಮಾಡಿಕೊಂಡವರು. ಇವರು ಅಂಬಾಗಿಲಿನಲ್ಲಿ ಟೈಲರಿಂಗ್ ಕೆಲಸ ಮಾಡಿಕೊಂಡಿದ್ದು. ಅವಿವಾಹಿತರಾಗಿದ್ದರು. ಲಾಕ್ ಡೌನ್ ಹಿನ್ನೆಲೆ ಮನೆಯಲ್ಲಿಯೇ ಇದ್ದು, ಸುಮಾರು 1 ವಾರದಿಂದ ಎದೆನೋವಿನಿಂದ ಬಳಲುತ್ತಿದ್ದ ಇವರು ಸ್ಥಳೀಯ ಕ್ಲೀನಿಕ್ ನಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು.

ತಮ್ಮ ಅನಾರೋಗ್ಯದ ಕಾರಣದಿಂದ ಅಥವಾ ಇನ್ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮೇ.19 ರಂದು  ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!