ರಾಜ್ಯದಲ್ಲಿ ಇನ್ನೂ 14 ದಿನ ಲಾಕ್‌ಡೌನ್ ವಿಸ್ತರಣೆ; ಜೂನ್ 7ರ ವರೆಗೆ ಕಠಿಣ ನಿರ್ಬಂಧ ಜಾರಿ!
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣಕ್ಕೆ ಮತ್ತೆ 14 ದಿನ (ಜೂನ್ 7) ಲಾಕ್‌ಡೌನ್ ಅನ್ನು ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕೊರೋನಾ ಎರಡನೇ ಅಲೆಯಲ್ಲಿ ಸೋಂಕಿನಿಂದ ಸಾವು ನೋವು ಹೆಚ್ಚುತ್ತಿರುವ ಹಿನ್ನೆಲೆ ಲಾಕ್ ಡೌನ್ ಅನ್ನು ಮತ್ತೆ 14 ದಿನ ವಿಸ್ತರಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಅದರಂತೆ ಮೇ 24ರಿಂದ ಜೂನ್ 7ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ.
ಸಧ್ಯ ಜಾರಿಯಲ್ಲಿರುವ ಮಾರ್ಗಸೂಚಿಯೇ ಮುಂದುವರಿಯಲಿದ್ದು ಬೆಳಿಗ್ಗೆ 6ರಿಂದ 10 ಗಂಟೆಯ ವರೆಗೆ ಜನರಿಗೆ ಅಗತ್ಯ ವಸ್ತು ಖರೀದಿಗೆ ಅವಕಾಶವಿರಲಿದೆ.
ಜನರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ಕೊರೋನಾ ನಿಯಮಗಳನ್ನು ಕಟ್ಟುನಿಟ್ತಾಗಿ ಪಾಲಿಸಬೇಕೆಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.