ಉಡುಪಿ: 855 ಪಾಸಿಟಿವ್, 7 ಮಂದಿ ಮೃತ್ಯು, 1223 ಸೋಂಕಿತರು ಗುಣಮುಖ

ಉಡುಪಿ ಮೇ 21(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿನಿಂದ ಗುಣಮುಖ ರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಇದರಿಂದ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಇಳಿಮುಖ ವಾಗುತ್ತಿರುವುದು ಕಂಡು ಬಂದಿದೆ.

ಜಿಲ್ಲೆಯಲ್ಲಿ ಇಂದು 855 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 324, ಕುಂದಾಪುರ 380, ಕಾರ್ಕಳ 141 ಹಾಗೂ ಹೊರ ಜಿಲ್ಲೆಯ 10 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 5960 ಕೋವಿಡ್ ಸಕ್ರಿಯ ಪ್ರಕರಣಗಳಿವೆ. 

ಇಂದು ಜಿಲ್ಲೆಯಲ್ಲಿ 7 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ನಾಲ್ವರು ವ್ಯಕ್ತಿಗಳು ಹಾಗೂ ಓರ್ವ ಮಹಿಳೆ ಮತ್ತು ಕಾರ್ಕಳದ ಇಬ್ಬರು ವ್ಯಕ್ತಿಗಳು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೇ. 20 ರಂದು ಜಿಲ್ಲೆಯಲ್ಲಿ  1223 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 44,650  ಮಂದಿ ಗುಣಮುಖರಾಗಿದ್ದಾರೆ.

ಮೇ. 20 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು  5, 59,210 ಮಂದಿಯನ್ನು ಕೋವಿಡ್  ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 50,903 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 293 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!