ಉಡುಪಿ: ಮೇ 22 ರಂದು ಕೋವಿಡ್ ಲಸಿಕೆ ನೀಡುವ ಬಗ್ಗೆ ಮಾಹಿತಿ
ಉಡುಪಿ ಮೇ 21 (ಉಡುಪಿ ಟೈಮ್ಸ್ ವರದಿ): ಕೋವ್ಯಾಕ್ಸಿನ್ ಪ್ರಥಮ ಡೋಸ್ ಜಿಲ್ಲೆಯಲ್ಲಿ ಲಭ್ಯವಿರುವುದಿಲ್ಲ. ಗ್ರಾಮೀಣ ಪ್ರದೇಶದಲ್ಲಿ 45 ವರ್ಷ ಮೇಲ್ಪಟ್ಟವರು//HCW/FLW ಇವರು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಪೂರ್ಣಗೊಂಡು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಮೇ 22 ರಂದು ಲಸಿಕಾ
ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು ಗ್ರಾಮೀಣ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 30 ಅಥವಾ ಅದಕ್ಕಿಂತ ಮೊದಲು 1ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ
ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಮೇ 22 ರಂದು ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವುದು.
ಮೇ 22 ರಂದು ರಂದು ಉಡುಪಿ ನಗರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 30 ಅಥವಾ ಅದಕ್ಕಿಂತ ಮೊದಲು 1ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 2ನೇ ಡೋಸ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಉಡುಪಿಯಲ್ಲಿ (ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಳೆ ಕಟ್ಟಡ,ಅಲಂಕಾರಥಿಯೇಟರ್ ಹತ್ತಿರ) (150ಡೋಸ್), ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲದಲ್ಲಿ (೧೦೦ ಡೋಸ್), ಹಾಗೂ ಸರಕಾರಿ ತಾಯಿ ಮತ್ತು ಮಕ್ಕಳ (ಬಿ.ಆರ್.ಎಸ್) ಆಸ್ಪತ್ರೆ, ಉಡುಪಿಯಲ್ಲಿ (140ಡೋಸ್) ಬೆಳಿಗ್ಗೆ9.30 ರಿಂದ ಅಪರಾಹ್ನ 2 ಗಂಟೆಯವರೆಗೆ ನೀಡಲಾಗುವುದು. ಸದರಿ 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಬಾಕಿ ಇರುವವರಿಗೆ SMS ಕಳುಹಿಸಲಾಗುವುದು.
SMS ಬಂದವರು ಆಸ್ಪತ್ರೆಗೆ ಬಂದು ಲಸಿಕೆಯನ್ನು ಪಡೆದುಕೊಳ್ಳುವುದು. ಮೇ 22 ರಂದು ರಂದು ಉಡುಪಿ ನಗರ ಪ್ರದೇಶದ\ ಅಂಗವಿಕಲತೆ (ಮಾನಸಿಕ ಅಸ್ವಸ್ಥತೆ ಸೇರಿದಂತೆ) ಹೊಂದಿರುವ 18 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಮಾತ್ರ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು, ಉಡುಪಿಯಲ್ಲಿ (ಸೇಂಟ್ ಸಿಸಿಲಿ ಶಾಲೆ) ಬೆಳಿಗ್ಗೆ 9.30 ರಿಂದ ಅಪರಾಹ್ನ 4 ಗಂಟೆಯವರೆಗೆ ಕೋವಿಶೀಲ್ಡ್ ಲಸಿಕೆ ಪ್ರಥಮ ಡೋಸ್ ನೀಡಲಾಗುವುದು. ಆಧಾರ್ ಕಾರ್ಢ ಮತ್ತು ಸರಕಾರದಿಂದ ನೀಡಲ್ಪಟ್ಟ ಅಂಗವಿಕಲರ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಲಸಿಕಾ ಕೇಂದ್ರದಲ್ಲಿ ಹಾಜರುಪಡಿಸಬೇಕು ಎಂದು ಜಿಲ್ಲಾ ಆರೊಗ್ಯ ಮತ್ತು ಕು.ಕ ಇಲಾಖೆ ಪ್ರಕಟಣೆ ತಿಳಿಸಿದೆ.