ಉಡುಪಿ ಮೇ 22(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ ವಾಗುತ್ತಿದೆ. ಆದರೆ ಈ ನಡುವೆ ಕೋವಿಡ್ ನಿಂದ ಮೃತಪಡುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಜಿಲ್ಲೆಯ ಜನತೆ ಹೆಚ್ಚಿನ ಜಾಗರೂಕರಾಗಿರಬೇಕಾಗಿದೆ.
ಜಿಲ್ಲೆಯಲ್ಲಿ ಇಂದು 849 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 324,ಕುಂದಾಪುರ 303, ಕಾರ್ಕಳ 216 ಹಾಗೂ ಹೊರ ಜಿಲ್ಲೆಯ 6 ಮಂದಿಯಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 5640 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಓರ್ವ ವ್ಯಕ್ತಿ ಹಾಗೂ ಓರ್ವ ಮಹಿಳೆ , ಕುಂದಾಪುರದ ಇಬ್ಬರು ವ್ಯಕ್ತಿಗಳು ಹಾಗೂ ಓರ್ವ ಮಹಿಳೆ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೇ. 21 ರಂದು ಜಿಲ್ಲೆಯಲ್ಲಿ 1,164 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 45,814 ಮಂದಿ ಗುಣಮುಖರಾಗಿದ್ದಾರೆ.
ಮೇ. 21 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,62,531 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 51,752 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 298 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
| | |