ಠಾಣೆಯಲ್ಲಿಯೇ ಪಾರ್ಟಿ- ಎಸ್ಸೈ ಸಹಿತ 10 ಸಿಬ್ಬಂದಿಗೆ ಕೊರೊನಾ ಸೋಂಕು: ಠಾಣೆ ಸೀಲ್ ಡೌನ್!

ಪಡುಬಿದ್ರೆ ಮೇ.22(ಉಡುಪಿ ಟೈಮ್ಸ್ ವರದಿ) ಪೊಲೀಸ್ ಠಾಣೆಯ ಔತಣ ಕೂಟದಲ್ಲಿ ಭಾಗವಹಿಸಿದ ಎಸ್ಸೈ ಸಹಿತ  ಠಾಣೆಯ 10 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಡಪಟ್ಟಿದೆ ಎಂದು ತಿಳಿದು ಬಂದಿದೆ.

ಸದ್ಯ ಸೋಂಕು ದೃಢಪಟ್ಟ ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ‌ಸಿಬ್ಬಂದಿಗಳು ಕ್ವಾರಂಟೈನ್​​​ನ​ಲ್ಲಿದ್ದಾರೆ. ಅಲ್ಲದೆ ಪಡುಬಿದ್ರಿ ಪೊಲೀಸ್ ಠಾಣೆಯನ್ನು 24 ಗಂಟೆಗಳ ಕಾಲ ಸೀಲ್ಡೌನ್ ಮಾಡಲಾಗಿದೆ. ಇದರೊಂದಿಗೆ ಪೊಲೀಸ್ ಠಾಣೆಯನ್ನು ಪಡುಬಿದ್ರಿ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ.

ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಕೆಲವು ದಿನಗಳ ಹಿಂದೆ  ಪೊಲೀಸರೊಬ್ಬರ ಹುಟ್ಟು ಹಬ್ಬದ ಪ್ರಯುಕ್ತ ಔತಣ ಕೂಟ ಏರ್ಪಡಿಸಲಾಗಿತ್ತು. ಆ ಸಮಾರಂಭ ನಡೆದ ವಾರದೊಳಗೆ ಸಿಬ್ಬಂದಿಯೊಬ್ಬರಿಗೆ ಜ್ವರ ಬಂದ ಹಿನ್ನೆಲೆ ಕೊವಿಡ್ ಪರೀಕ್ಷೆ ಗೊಳಪಡಿಸಿದಾಗ ಪಾಸಿಟಿವ್ ಬಂದಿತ್ತು. ಬಳಿಕ ಠಾಣೆಯ ಎಲ್ಲರಿಗೂ ಕೊವಿಡ್ ಪರೀಕ್ಷೆ ನಡೆಸಲಾಗಿದ್ದು,ಈ ಸಂದರ್ಭ ಎಸ್ಸೈ ಸಹಿತ 10 ಪೊಲೀಸರಿಗೆ ಕೊರೋನಾ ದೃಡಪಟ್ಟಿರುವುದಾಗಿ ತಿಳಿದು ಬಂದಿದೆ.

ಈ ನಡುವೆ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಪಡುಬಿದ್ರಿ ಪೊಲೀಸ್ ಠಾಣಾ ಎಸೈ ದಿಲೀಪ್ ರವರ ತೀವ್ರ ನಿರ್ಲಕ್ಷತನವೇ ಇದಕ್ಕೆ ಕಾರಣವಾಗಿರುವುದಾಗಿದೆ. ಈ ಬಗ್ಗೆ ಉನ್ನತ ಅಧಿಕಾರಿಗಳು ಕ್ರಮಕೈಗೊಳ್ಳುವರೇ ಎಂದು ಕಾದುನೋಡಬೇಕಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!