ಉಡುಪಿ, ದ.ಕ. ಜಿಲ್ಲೆಗಳಲ್ಲಿ ಜೂ. 26ರವರೆಗೆ ‘ಯೆಲ್ಲೊ ಅಲರ್ಟ್

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಜೂನ್ 25ರಿಂದ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೂ. 24ರಿಂದ 26ರವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ 25ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!