ದ.ಕ ಲಾಕ್ ಡೌನ್ – ಜೂ.7ರವರೆಗೆ ಮುಂದುವರೆಸಿ: ಜಿಲ್ಲಾಧಿಕಾರಿ ಆದೇಶ

ದ.ಕ ಮೇ.23(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಾದ್ಯಂತ  ಕೋವಿಡ್ ಸೋಂಕು ಉಲ್ಬಣ ಗೊಳ್ಳುತ್ತಿರುವ ಹಿನ್ನೆಲೆ ಈಗಾಗಲೇ ಜಾರಿ ಮಾಡಿರುವ ಲಾಕ್ ಡೌನ್ ನ್ನು ಜೂ.7 ರ ವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ಆದೇಶ ನೀಡಿದ್ದಾರೆ.

ಅದರಂತೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿ ಇರುವ ಮಾರ್ಗ ಸೂಚಿಯನ್ನು ಯಥಾವತ್ತಾಗಿ ಜೂ.7 ರ ಬೆಳಿಗ್ಗೆ 6 ಗಂಟೆ ವರೆಗೆ ವಿಸ್ತರಿಸಲಾಗಿದೆ.

ಈ ಮೂಲಕ ಸಾರ್ವಜನಿಕರು ಜಿಲ್ಲಾಡಳಿತದ ನಿರ್ದೇಶನವನ್ನು ತಪ್ಪದೇ ಪಾಲಿಸುವಂತೆ ಕೋರಲಾಗಿದೆ. ಇದರೊಂದಿಗೆ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಆದೇಶವನ್ನು ಯಾವುದೇ ವ್ಯಕ್ತಿ ವ್ಯಕ್ತಿಗಳು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ರ ಕಲಂ 51 ರಿಂದ 60ರ ಅನ್ವರ್ಯ ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 4.5 ಮತ್ತು 10 ರಂತೆ ಕ್ರಮ ಕೈಗೊಳ್ಳಲಾಗುತ್ತದೆ. ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!