ಉಡುಪಿ: 909 ಮಂದಿಯಲ್ಲಿ ಪಾಸಿಟಿವ್, ನಾಲ್ವರ ಮೃತ್ಯು- 772 ಗುಣಮುಖ
ಉಡುಪಿ ಮೇ 23(ಉಡುಪಿ ಟೈಮ್ಸ್ ವರದಿ): ಜಿಲ್ಲೆಯಲ್ಲಿ ಉಲ್ಬಣಗೊಳ್ಳುತ್ತಿರುವ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಲಾಗಿದೆ. ಆದರೂ ಅನೇಕರು ಕೋವಿಡ್ ನಿಯಮಗಳನ್ನು ಉಲ್ಲಂಘಿಸುತ್ತಿರುವುದರಿಂದ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿದೆ.
ಜಿಲ್ಲೆಯಲ್ಲಿ ಇಂದು 909 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 486, ಕುಂದಾಪುರ 273 , ಕಾರ್ಕಳ 148 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 5773 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ 4 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಮೂವರು ವ್ಯಕ್ತಿಗಳು ಹಾಗೂ ಕುಂದಾಪುರದ ಓರ್ವ ವ್ಯಕ್ತಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೇ. 22 ರಂದು ಜಿಲ್ಲೆಯಲ್ಲಿ 772 ಮಂದಿ ಸೋಂಕಿತರು ಆಸ್ಪತ್ರೆ ಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 46,586 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 5,66,549 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 52,661 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 302 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.