ತೋನ್ಸೆ ಪಂ. ಉಪಾಧ್ಯಕ್ಷ, ಕಾಂಗ್ರೆಸ್ ಮುಖಂಡ ನಿತ್ಯಾನಂದ ಕೆಮ್ಮಣ್ಣು ಕೋವಿಡ್’ಗೆ ಬಲಿ

ಉಡುಪಿ (ಉಡುಪಿ ಟೈಮ್ಸ್ ವರದಿ): ಬಿಲ್ಲವ ಸಮುದಾಯದ ಯುವ ಮುಂದಾಳು, ತೋನ್ಸೆ ಪಂಚಾಯತ್ ಉಪಾಧ್ಯಕ್ಷರಾದ, ಕರಾಟೆ ಸಂಘದ ರಾಜ್ಯಾಧ್ಯಕ್ಷ ನಿತ್ಯಾನಂದ ಕೆಮ್ಮಣ್ಣು ಕೋವಿಡ್ ಸೋಂಕಿನಿಂದ ರವಿವಾರ ತಡ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ .

ಈ ಹಿಂದೆ ಪಂಚಾಯತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಅವರು ಗ್ರಾಮದ ಪ್ರಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರೂ ಪಕ್ಷಭೇದವನ್ನು ದೂರವಿಟ್ಟು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತೋನ್ಸೆ ಪಂಚಾಯತ್’ನ ಸರ್ವಸದಸ್ಯರು ಅಭಿವೃದ್ಧಿ ಕಾರ್ಯದಲ್ಲಿ ಒಂದಾಗುವಂತೆ ಮಾಡಿದ್ದರು.

ಅವಿವಾಹಿತರಾಗಿದ್ದ ನಿತ್ಯಾನಂದ ಒರ್ವ ಉತ್ತಮ ಕರಾಟೆ ಪಟು. ಅವರು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯನ್ನು ಒಳಕಾಡು ಶಾಲೆಯಲ್ಲಿ ಯಶಸ್ವಿಯಾಗಿ ಆಯೋಜಿಸಿದ್ದರು. ಕ್ರಿಡಾ ಸೇವೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗೌರವಕ್ಕೆ ಕೂಡ ಪಾತ್ರರಾಗಿದ್ದರು.

ಮೃತರು ತಂದೆ, ತಾಯಿ, ಸಹೋದರಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!