ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ತನಿಖೆ ಸಿಐಡಿಗೆ- ಎಸ್ಐ ಉಡುಪಿಗೆ ವರ್ಗಾವಣೆ

ಚಿಕ್ಕಮಗಳೂರು: ವಿಚಾರಣೆ ನೆಪದಲ್ಲಿ ಠಾಣೆಗೆ ಕರೆದೊಯ್ದು ಮೂತ್ರ ನೆಕ್ಕಿಸಿದ್ದಾರೆ’ ಎಂದು ಮೂಡಿಗರೆ ತಾಲ್ಲೂಕಿನ ಕಿರುಗುಂದ ಗ್ರಾಮದ ಪರಿಶಿಷ್ಟ ಸಮುದಾಯದ ಕೆ.ಎಲ್‌.ಪುನೀತ್‌ ದಾಖಲಿಸಿರುವ ದೂರಿಗೆ ಸಂಬಂಧಿಸಿದಂತೆ ಪಿಎಸ್‌ಐ ಅರ್ಜುನ್‌ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆಂದು ತಿಳಿದು ಬಂದಿದೆ.

‘ಪಶ್ವಿಮ ವಲಯ ಐಜಿಪಿ ಅವರು ಪಿಎಸ್‌ಐ ಅರ್ಜುನ್‌ ಅವರನ್ನು ಅಮಾನತುಗೊಳಿಸಿ, ಉಡುಪಿ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ಘಟನೆಯ ಬಗ್ಗೆ ಸಮಗ್ರ ಇಲಾಖಾ ತನಿಖೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಡಿವೈಎಸ್ಪಿ ಅವರಿಗೆ ವಹಿಸಲಾಗಿದೆ.

ಐಪಿಸಿ 323 (ಹಲ್ಲೆ), 330 (ಉದ್ದೇಶಪೂರ್ವಕವಾಗಿ ನೋವುಂಟು ಮಾಡುವುದು), 342 (ಅಕ್ರಮ ಬಂಧನ), 506 (ಜೀವ ಬೆದರಿಕೆ) ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. 

Leave a Reply

Your email address will not be published. Required fields are marked *

error: Content is protected !!