ವಲಸೆ ಕಾರ್ಮಿಕರ ಕಾಲೊನಿಯ ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ
ಉಡುಪಿ: ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ಬೀಡಿನಗುಡ್ಡೆಯಲ್ಲಿರುವ ವಲಸೆ ಕಾರ್ಮಿಕರ ವಸತಿ ಪ್ರದೇಶ ಮತ್ತು ಪರಿಶಿಷ್ಟ ಪಂಗಡದ ಕಾಲೊನಿಯಲ್ಲಿ ವಾಸಿಸುತ್ತಿರುವ ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಗಳನ್ನು ವಿತರಿಸುವ “ಗರಿಮಾ”ಅಥವಾ “ಘನತೆ”ಕಾರ್ಯಕ್ರಮವು ನಡೆಯಿತು.
ಈ ಕಾರ್ಯಕ್ರಮದಲ್ಲಿ ಸಹಕಾರಿ ಧುರೀಣೆ,ಪಕ್ಷದ ಹಿರಿಯ ನಾಯಕಿ ಸರಳಾ ಕಾಂಚನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆರೋನಿಕಾ ಕರ್ನೇಲಿಯೋ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ಶೆಟ್ಟಿ,ಕಾಪು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್, ತಾಲೂಕು ಪಂಚಾಯತ್ ಸದಸ್ಯೆ ಡಾ.ಸುನೀತಾ ಶೆಟ್ಟಿ, ಆಶಾ ಚಂದ್ರಶೇಖರ್, ಜಯಶ್ರೀ ಶೇಟ್, ಉಡುಪಿ ನಗರಸಭೆಯ ಮಾಜಿ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ರಮಾದೇವಿ, ಚಂದ್ರಾವತಿ ಭಂಡಾರಿ, ನಗರಸಭಾ ಸದಸ್ಯ ರಮೇಶ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್, ಗಣೇಶ್ ನೆರ್ಗಿ, ಸಾಯಿರಾಜ್, ನಾರಾಯಣ ಕುಂದರ್, ಪ್ರಶಾಂತ್ ಪೂಜಾರಿ, ರಾಜು ಪೂಜಾರಿ ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಯವರು ಪ್ರಸ್ತಾವನೆ ಗೈದು ಸರ್ವರನ್ನೂ ಸ್ವಾಗತಿಸಿದರು.ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್ ವಂದಿಸಿದರು.