ಉಡುಪಿ: ಹೂವು, ಹಣ್ಣು, ತರಕಾರಿ ಬೆಳೆಗಾರರಿಗೆ ಪರಿಹಾರ ಪಡೆಯುವ ಮಾಹಿತಿ
ಉಡುಪಿ ಮೇ 28(ಉಡುಪಿ ಟೈಮ್ಸ್ ವರದಿ): ಕೋವಿಡ್-19 ರ ಎರಡನೆ ಅಲೆ ಕಾರಣ ರಾಜ್ಯದಲ್ಲಿ ವಿಧಿಸಿರುವ ಜನತಾ ಕರ್ಪ್ಯೂ ಅವಧಿಯಲ್ಲಿ ಹೂವು, ಹಣ್ಣು ಹಾಗೂ ತರಕಾರಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಹೆಕ್ಟೇರ್ ರೂ. 10000 ಪರಿಹಾರವನ್ನು ಗರಿಷ್ಟ 11 ಹೆಕ್ಟೇರ್ ಗೆ ಹಾಗೂ ಕನಿಷ್ಟ ರೂ.2000 ಕ್ಕೆ ಮಿತಿಗೊಳಿಸಿ ವಿತರಿಸಲಾಗುವುದು.
ವಾರ್ಷಿಕ ಹೂವು, ಹಣ್ಣುಮತ್ತುತರಕಾರಿ ಬೆಳೆಗಳಿಗೆ 2021-22 ನೇ ಸಾಲಿನ ಬೇಸಿಗೆ ಬೆಳೆ ಸಮೀಕ್ಷೆ ಹಾಗೂ ಬಹುವಾರ್ಷಿಕ ಬೆಳೆಗಳಿಗೆ 2021-22 ನೇ ಸಾಲಿನಮುಂಗಾರು ಬೆಳೆ ಸಮೀಕ್ಷೆ ಮಾಹಿತಿಯಆಧಾರದಲ್ಲಿ ಪಾವತಿಸಲು ಸರ್ಕಾರದ ಸೂಚನೆಯಿದ್ದು, ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಹಾಗೂ ಇಲಾಖೆಯತಂತ್ರಾಂಶದಲ್ಲಿ ನೊಂದಣಿಯಾಗಿರುವ ಹಾಗೂ ನೊಂದಣಿಯಾಗದೆ ಇರುವರೈತರ ವಿವರಗಳು ತೋಟಗಾರಿಕೆ ಇಲಾಖಾ ಕಛೇರಿಗಳಲ್ಲಿ ಲಭ್ಯವಿರುತ್ತದೆ.
ರೈತರು ಈಗಾಗಲೇಇಲಾಖೆಯ FRUITS ತಂತ್ರಾಂಶದಲ್ಲಿ ನೊಂದಣಿಯಾಗಿದ್ದರೆ ಅರ್ಹ ರೈತರಿಗೆ ಪರಿಹಾರವನ್ನು ನೇರವಾಗಿ ಪಾವತಿಸಲಾಗುವುದು. FRUITS ತಂತ್ರಾಂಶದಲ್ಲಿ ನೋಂದಣಿಯಾಗದೇ ಇರುವ ರೈತರು ತಮ್ಮಆಧಾರ್ ನ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಹಾಗೂ ಮೊಬೈಲ್‌ಸಂಖ್ಯೆಯ ವಿವರಗಳನ್ನು ತಾಲೂಕುತೋಟಗಾರಿಕೆ ಇಲಾಖೆಯ ಕಛೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿತೋಟಗಾರಿಕೆಇಲಾಖೆಯಜಿಲ್ಲಾಅಥವಾ ಸಂಬಂಧಿಸಿದ ತಾಲೂಕು ಮಟ್ಟದ ಕಛೇರಿಯನ್ನು ಹಾಗೂ ಜಿಲ್ಲೆಯ ವಿವಿಧತೋಟಗಾರಿಕೆ ಇಲಾಖಾ ಕಚೇರಿಗಳ ದೂರವಾಣಿ ಸಂಖ್ಯೆ: ತೋಟಗಾರಿಕೆಉಪನಿರ್ದೇಶಕರು (ಜಿ.ಪಂ.),
ಉಡುಪಿ ಜಿಲ್ಲೆ: 0820-2531950, ಹಿರಿಯ ಸಹಾಯಕತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಉಡುಪಿ ತಾಲೂಕು: 0820- 2522837, ಹಿರಿಯ ಸಹಾಯಕತೋಟಗಾರಿಕೆ ನಿರ್ದೇಶಕರು (ಜಿ.ಪಂ.),ಕುoದಾಪುರತಾಲೂಕು: 08254-230813, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.), ಕಾರ್ಕಳ ತಾಲೂಕು: 08258-230288 ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.