ಮಲ್ಪೆ: ಕೋವಿಡ್ ನಿಯಮ ಉಲ್ಲಂಘಿಸಿ ನಡೆಯುತ್ತಿದ್ದ ಮಟ್ಕಾ ಜುಗಾರಿ ಅಡ್ಡೆಗೆ ದಾಳಿ

ಮಲ್ಪೆ ಮೇ.28(ಉಡುಪಿ ಟೈಮ್ಸ್ ವರದಿ): ಕೋವಿಡ್ ನಿಯಮ ಉಲ್ಲಂಘಿಸಿ ನಡೆಯುತ್ತಿದ್ದ ಮಟ್ಕಾ ಜುಗಾರಿ ಅಡ್ಡೆಗೆ ಮಲ್ಪೆ ಪೊಲೀಸರು ದಾಳಿ ನಡೆಸಿದ್ದಾರೆ.

ಮೇ.27 ರಂದು ಕಡೇಕಾರು ಗ್ರಾಮದ ಕನ್ನರಪಾಡಿ ಕಿನ್ನಿಮೂಲ್ಕಿ ಸರ್ವಿಸ್ ರಸ್ತೆಯ ಬಳಿ ಮಟ್ಕ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯ ವಾದ ಹಿನ್ನೆಲೆ ಮಲ್ಪೆ ಠಾಣೆಯ ಪೊಲೀಸರು ದಾಳಿ ನಡೆಸಿ, ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ವ್ಯಕ್ತಿಯೊಬ್ಬ ಕಲ್ಯಾಣಿ ಮಾರ್ಕೇಟ್‌, ಬಾಂಬೆ ಮಾರ್ಕೇಟ್‌ ಒಂದು ರೂಪಾಯಿಗೆ 70 ರೂಪಾಯಿ ಕೊಡುತ್ತೇನೆಂದು ಹೇಳುತ್ತಾ ಜನರನ್ನು ಸೇರಿಸಿ ಕೊಂಡು ಅವರಿಂದ ಹಣ ಪಡೆದುಕೊಂಡು ಮಟ್ಕಾ ಜುಗಾರಿ ಆಟ ನಡೆಸುತ್ತಿರುವುದು ಕಂಡು ಬಂದಿದೆ.

ಈ ವೇಳೆ ಸುರೇಶ (48) ಎಂಬಾತನನ್ನು ಪೊಲೀಸರು ಹಿಡಿದು ವಿಚಾರಿಸಿದಾಗ ತಾನು ಜುಗಾರಿ ಆಟದಿಂದ ಬಂದ ಹಣವನ್ನು ತನ್ನ ಸ್ವಂತ ಲಾಭಕ್ಕಾಗಿ ಬಳಸುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈ ವೇಳೆ ಸ್ಥಳದಲ್ಲಿ ಇದ್ದ ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ಒಟ್ಟು 1350 ರೂ. ನಗದು, 1 ಮಟ್ಕಾ ಚೀಟಿ ಹಾಗೂ 1 ಬಾಲ್ ಪೆನ್ನು  ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!